Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವೈದ್ಯರು, ನರ್ಸ್, ಫಾರ್ಮಸಿಸ್ಟ್  ಹುದ್ದೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್
  • Politics
  • State
  • ಬೆಳಗಾವಿ

ವೈದ್ಯರು, ನರ್ಸ್, ಫಾರ್ಮಸಿಸ್ಟ್  ಹುದ್ದೆ ಭರ್ತಿಗೆ ಕ್ರಮ: ದಿನೇಶ್ ಗುಂಡೂರಾವ್

Praja Vahini December 11, 2025 1 minute read
WhatsApp Image 2025-12-11 at 13.16.09
Spread the love

ಬೆಳಗಾವಿ: ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರು, ಕರ್ತವ್ಯ ವೈದ್ಯಾಧಿಕಾರಿಗಳು, ನರ್ಸ್‍ಗಳು ಹಾಗೂ ಫಾರ್ಮಸಿಸ್ಟ್ ಹುದ್ದೆಗಳನ್ನು ಒಂದು ತಿಂಗಳೊಳಗೆ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಇಂದು (ಗುರುವಾರ ಡಿ. 11) ಮಾತನಾಡಿದ ಅವರು, ಇಲಾಖೆಯಲ್ಲಿ ಖಾಲಿ ಇರುವ 337 ತಜ್ಞ ವೈದ್ಯರು, 250 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಈಗಾಗಲೆ ಅನುಮತಿ ನೀಡಲಾಗಿದೆ.  ಸರ್ಕಾರಿ ಕೋಟಾದಡಿ ವ್ಯಾಸಂಗ ಪೂರೈಸಿದ ವೈದ್ಯರು, ತಜ್ಞ ವೈದ್ಯರು 01 ವರ್ಷ ಕಡ್ಡಾಯ ಸರ್ಕಾರಿ ಸೇವೆ ಕೈಗೊಳ್ಳುವ ಕಾರ್ಯಕ್ರಮದಡಿ 1500 ವೈದ್ಯರನ್ನು ನೇಮಕ ಮಾಡಲು ಕೂಡ ಕ್ರಮ ಕೈಗೊಳ್ಳಲಾಗಿದೆ.  ಇದನ್ನೂ ಓದಿ: ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ನೇರ ನೇಮಕಾತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್

ಇಲಾಖೆಯಲ್ಲಿ ಮಂಜೂರಾಗಿ ಖಾಲಿ ಇರುವ 120 ತಜ್ಞ ವೈದ್ಯರು ಮತ್ತು 100 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆ ಸಹಮತಿಸಿದ್ದು, ಈ ಪ್ರಕ್ರಿಯೆಯೂ ಕೂಡ ಪ್ರಗತಿಯಲ್ಲಿದೆ. ತಜ್ಞ ವೈದ್ಯರ ನೇಮಕಾತಿ ಕುರಿತಂತೆ ಹೈಕೋರ್ಟ್‍ನಲ್ಲಿದ್ದ ಪ್ರಕರಣ ಕೂಡ ಅಂತಿಮ ಹಂತದಲ್ಲಿದ್ದು, ಶೀಘ್ರ ಇತ್ಯರ್ಥಗೊಳ್ಳಲಿದೆ.  ರಾಜ್ಯದಲ್ಲಿ 600 ಶುಶ್ರೂಷಾಧಿಕಾರಿಗಳು, 400 ಕಿರಿಯ ಪ್ರಯೋಗಶಾಲಾ ತಂತ್ರಜ್ಞರು ಹಾಗೂ 400 ಫಾರ್ಮಾಸಿಸ್ಟ್ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಕೌನ್ಸಿಲಿಂಗ್ ಮೂಲಕ ನೇಮಕ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಲಾಗುವುದು ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್ ನೇರ ನೇಮಕಾತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್
Next: ಡ್ರಗ್ಸ್ ಹಾವಳಿಗೆ ಬ್ರೇಕ್ ಹಾಕಲು ಅಗತ್ಯ ಕ್ರಮ: ಜಿ.ಪರಮೇಶ್ವರ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.