Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • 2 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಬದ್ಧವಾಗಿದೆ: ಡಿಕೆಶಿ
  • Politics
  • State
  • ಬೆಳಗಾವಿ

2 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಬದ್ಧವಾಗಿದೆ: ಡಿಕೆಶಿ

Praja Vahini December 11, 2025 1 minute read
WhatsApp Image 2025-12-11 at 15.42.37
Spread the love

ಬೆಳಗಾವಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2 ಲಕ್ಷ ಸರ್ಕಾರಿ ಹುದ್ದೆಗಳ ಭರ್ತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ನಾವು ಇದಕ್ಕಾಗಿ ನಮ್ಮದೇ ಆದ ಸಮಯ ನಿಗದಿ ಮಾಡಿಕೊಂಡಿದ್ದೇವೆ. ಇದರ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಹೇಳಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ. ಒಳಮೀಸಲಾತಿ ವಿಚಾರ ಬಾಕಿ ಇರುವ ಕಾರಣಕ್ಕೆ ಒಂದಷ್ಟು ಭರ್ತಿ ಕೆಲಸ ಬಾಕಿಯಿದೆ ಎಂದರು.

ಚಿಕ್ಕನಾಯಕನಹಳ್ಳಿ ತಾಲ್ಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ ನಿಯಮಿತ, ವಿಜೆಎನ್‌ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪಡೆದುಕೊಂಡಿದ್ದಾರೆ. ಸುಮಾರು 2,800 ಕೋಟಿ ರೂ. ಮೊತ್ತದ ಕಾಮಗಾರಿಗಳು ಇದೊಂದೇ ತಾಲ್ಲೂಕಿನಲ್ಲಿ ನಡೆಯುತ್ತಿದೆ.

ಚಿಕ್ಕನಾಯಕನಹಳ್ಳಿಯವರು ಇಷ್ಟೊಂದು ಬುದ್ದಿವಂತರು ಎಂದು ನಾನು ತಿಳಿದುಕೊಂಡಿರಲಿಲ್ಲ. ಆದರೂ ಈಗ ಸ್ಪೆಷಲ್‌ ಪ್ಯಾಕೇಜ್‌ ನೀಡಿ ಎಂದು ಹೇಳುತ್ತಿದ್ದಾರೆ. ಯಾರ ಕಾಲದಲ್ಲಿ ಇದೆಲ್ಲವೂ ಆಯಿತು ಎಂದು ನಾನು ಚರ್ಚೆ ನಡೆಸಲು ಹೋಗುವುದಿಲ್ಲ. ಪಕ್ಷ, ವ್ಯಕ್ತಿ ಎಲ್ಲವನ್ನು ಬಿಟ್ಟು ಕೆಲಸವನ್ನು ಮಾಡಿಸಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ಮಧು ಬಂಗಾರಪ್ಪ!

ಕೇಂದ್ರ ಸರ್ಕಾರ ಭದ್ರಾ ಮೇಲ್ದಂಡೆಗೆ ಘೋಷಿಸಿದ 5,300 ಕೋಟಿ ರೂ. ಹಣ ನೀಡಿದರೆ, ಸಾಕಷ್ಟು ಕೆಲಸಗಳನ್ನು ಮುಗಿಸಬಹುದು. ನಾನು ಪದೇ, ಪದೇ ಕೇಂದ್ರ ಸರ್ಕಾರ ಹಣ ಕೊಟ್ಟಿಲ್ಲ ಎಂದರೆ ವಿಪಕ್ಷಗಳಿಗೆ ಬೇಸರವಾಗಬಹುದು. ಅವರು ಕೊಡದೇ ಇದ್ದರು, ಈ ಭಾಗದ ಕೆಲಸಗಳನ್ನು ಪೂರ್ಣಗೊಳಿಸಬೇಕಿದೆ. ಇನ್ನು ಈ ಭಾಗದಲ್ಲಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಸಿಗಬೇಕಿದೆ. ಅನುಮತಿ ಸಿಕ್ಕರೆ ಹೆಚ್ಚಿನ ಕೆಲಸ ಮುಗಿದಂತೆ ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ ಮಧು ಬಂಗಾರಪ್ಪ!
Next: ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಗ್ರೀನ್ ಸಿಗ್ನಲ್ ನೀಡಿದ ಮುನಿಯಪ್ಪ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.