ಕೊಪ್ಪಳ: ಇತ್ತೀಚಿಗೆ ಬೆಂಗಳೂರು ನಗರದ ಕೆಆರ್ ಪುರಂ ನಲ್ಲಿ ಸಿಲಿಂಡರ್ ಸ್ಪೋಟಗೊಂಡು ಹಲವರು ಪ್ರಾಣ ಕಳೆದುಕೊಂಡಿದ್ದರು. ಅದು ಮಾಸುವ ಮುಂಚೆಯೇ ಇದೀಗ ಮತ್ತೊಂದು ರಾಜ್ಯದಲ್ಲಿ ಸಿಲಿಂಡರ್ ಸ್ಪೋಟಗೊಂಡು ಏಳು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಅವಘಡದಲ್ಲಿ ಗಾಯಗೊಂಡವರನ್ನು ರಾಜ (38), ಸುರೇಶ್ (35), ದುರುಗಪ್ಪ (27), ಹುಸೇನಮ್ಮ (40), ನಾಗರಾಜ (18), ದುರುಗಮ್ಮ (17), ವಿಷ್ಣು (16), ಶ್ರೀಕಾಂತ್ (22) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಕಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ. ಇದನ್ನೂ ಓದಿ: ಮುಂದಿನ ಆಯವ್ಯಯದಲ್ಲಿ ಯಲ್ಲಾಪುರದಲ್ಲಿ ವಸತಿ ನಿಲಯ ನಿರ್ಮಾಣ
ಹುಸೇನಮ್ಮ ಮನೆಯಲ್ಲಿ ಹೊಸದಾಗಿ ಸಿಲಿಂಡರ್ ತೆಗೆದುಕೊಂಡಿದ್ದರು. ಬೆಳಗ್ಗೆ ಆನ್ ಮಾಡುವಾಗ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆ ನೆಲಸಮವಾಗಿದೆ. ಅಲ್ಲದೇ ಅಕ್ಕಪಕ್ಕದ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಮನೆಯ ಅಕ್ಕಪಕ್ಕ ನಿಂತವರಿಗೂ ಸುಟ್ಟ ಗಾಯಗಳಾಗಿವೆ.
