Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ನಿಗಾವಹಿಸಲು ಸೂಚನೆ: ಶಿವರಾಜ ತಂಗಡಗಿ
  • Politics
  • State
  • ಬೆಳಗಾವಿ

ಕನ್ನಡ ಭಾಷಾ ನಾಮಫಲಕ ಅಳವಡಿಕೆಗೆ ನಿಗಾವಹಿಸಲು ಸೂಚನೆ: ಶಿವರಾಜ ತಂಗಡಗಿ

Praja Vahini December 12, 2025 1 minute read
WhatsApp Image 2025-12-12 at 15.59.00
Spread the love

ಬೆಳಗಾವಿ: ರಾಜ್ಯದಲ್ಲಿ ಕಡ್ಡಾಯ ಕನ್ನಡ ಭಾಷಾ ನಾಮಫಲಕ ಅಳವಡಿಕೆ ಕುರಿತು ನಿಗಾವಹಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವರಾದ ಶಿವರಾಜ ತಂಗಡಗಿ ಅವರು ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಇಂದು (ಶುಕ್ರವಾರ ಡಿ.12) ರಂದು ಸದಸ್ಯರಾದ ಡಾ.ಉಮಾಶ್ರೀ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು,  ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಮೂಲ ಕಾಯಿದೆ 17ನೇ ಪ್ರಕರಣದ ಆರನೇ ಉಪಪ್ರಕರಣದಂತೆ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್ ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು ಮತ್ತು ಹೋಟೆಲ್ಗಳು ಮುಂತಾದವುಗಳು ತಮ್ಮ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.60 ರಷ್ಟು ಪ್ರದರ್ಶಿಸಲಾಗಿದೆ ಮತ್ತು ಕನ್ನಡ ಭಾಷೆಯು ನಾಮಫಲಕದ ಮೇಲ್ಬಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಖಚಿತ ಪಡಿಸಿಕೊಳ್ಳತಕ್ಕದ್ದು” ಎಂದಿದ್ದು ಕಾಯ್ದೆಯ ಅನುಷ್ಠಾನ ಜವಾಬ್ದಾರಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳದ್ದಾಗಿರುತ್ತದೆ. ಇದು ನಿರಂತರ ಪ್ರಕ್ರಿಯೆಯಾಗಿರುವ ಕಾರಣ ಅಪೂರ್ಣಗೊಳ್ಳುವ ಪ್ರಶ್ನೆ ಉದ್ಭವಿಸುವುದಿಲ್ಲ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷ್ಠಾನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ.  ಇದನ್ನೂ ಓದಿ:  53ನೇ ವಸಂತಕ್ಕೆ ಕಾಲಿಟ್ಟ ಶಾಸಕ ಎಂ ಸತೀಶ್ ರೆಡ್ಡಿ                                   

ಕನ್ನಡದಲ್ಲಿ ನಾಮಫಲಕ ಅಳವಡಿಸಿಕೊಳ್ಳದ ಸಂಘ-ಸಂಸ್ಥೆಗಳ ವಿರುದ್ಧ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ನಿಯಮ 23ರ ಅನುಸಾರ ಮೊದಲನೆಯ ಅಪರಾಧಕ್ಕಾಗಿ ರೂ.5000, ಎರಡನೇ ಅಪರಾಧಕ್ಕಾಗಿ ರೂ. 10,000 ಮತ್ತು ನಂತರದ ಪ್ರತಿ ಅಪರಾಧಕ್ಕಾಗಿ ರೂ. 20,000 ರವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಮತ್ತು ಪರವಾನಗಿಯನ್ನು ರದ್ದುಗೊಳಿಸುವುದಕ್ಕೆ ಗುರಿಯಾಗುವುದು ಎಂದಿರುತ್ತದೆ. ಈ ಅಧಿನಿಯಮದಂತೆ ಕ್ರಮವಹಿಸಲು ಅನುಷ್ಠಾನ ಅಧಿಕಾರಿಗಳಾದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ ಎಂದು ಸಚಿವರು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: 53ನೇ ವಸಂತಕ್ಕೆ ಕಾಲಿಟ್ಟ ಶಾಸಕ ಎಂ ಸತೀಶ್ ರೆಡ್ಡಿ
Next: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಬಿ.ಎಸ್.ಸುರೇಶ್

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.