ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಆಗ್ರಹ
ಶಹಾಪುರ: ಕಾಮಗಾರಿಗಳು ಗುಣಮಟ್ಟ ಕಾಯ್ದುಕೊಳ್ಳಬೇಕು ಮತ್ತು ನಿಗದಿಪಡಿಸಿದ ಅವಧಿಯೊಳಗೆ ಸಾರ್ವಜನಿಕರ ಬಳಕೆಗೆ ಲಭ್ಯವಾಗುವಂತೆ ರಸ್ತೆ, ಚರಂಡಿಗಳ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಲಕ್ಷಾಂತರ ಅನುದಾನವನ್ನು ಸಮರ್ಪಕವಾಗಿ ಒದಗಿಸುತ್ತಿದ್ದಾರೆ. ಆದರೆ ಇಲ್ಲಿನ ಅಧಿಕಾರಿಗಳ ಮೇಲೆ ಹಿಡಿತವೇ ಇಲ್ಲದಂತಾಗಿದ್ದು, ಇವರ ನಿರ್ಲಕ್ಷತನಕ್ಕೆ ಕಳಪೆ ಮಟ್ಟದ ಕಾಮಗಾರಿಗಳು ನಡೆಯುತ್ತಿದ್ದು ಕೂಡಲೇ ಅವುಗಳನ್ನು ನಿಲ್ಲಿಸಿ ಗುಣಮಟ್ಟದ ಕಾಮಗಾರಿಗಳಿಗೆ ಆದ್ಯತೆ ನೀಡಬೇಕು ಎಂದು ದಲಿತ ಮುಖಂಡ ಶರಣು ಸಗರ ಆಗ್ರಹಿಸಿದ್ದಾರೆ.
ತಾಲೂಕಿನ ಸಗರ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದಡಿಯಲ್ಲಿ ಪ್ರಗತಿಯಲ್ಲಿರುವ ಚರಂಡಿ ಕಾಮಗಾರಿಯೂ ಅಧಿಕಾರಿಗಳ ನಿರ್ಲಕ್ಷö್ಯತನಕ್ಕೆ ಹಳ್ಳ ಹಿಡಿಯುತ್ತಿದೆ. ಕಳಪೆ ಕಾಮಗಾರಿಯಿಂದ ಚರಂಡಿ ಸ್ಲಾಬ್ ಗಳು ಕುಸಿದು ಬೀಳುತ್ತಿವೆ. ಗುತ್ತಿಗೆದಾರರು ನಿಯಮಗಳನ್ನು ಗಾಳಿಗೆ ತೂರಿ ಕಾಮಗಾರಿ ಮಾಡುತ್ತಿದ್ದಾರೆ, ಇದನ್ನು ನಿಲ್ಲಿಸಬೇಕು. ಕಳಪೆ ಕಾಮಗಾರಿಯಾಗಿದೆ, ಉತ್ತಮ ಗುಣಮಟ್ಟದ ಚರಂಡಿಗಳನ್ನು ನಿರ್ಮಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಹೋರಾಟಕ್ಕೆ ಸಿದ್ಧ
ಅಧಿಕಾರಿಗಳ ಮೇಲೆ ಹಿಡಿತ ಇಲ್ಲದಂತಾಗಿದ್ದು, ಉಡಾಫೆ ಉತ್ತರ ನೀಡಿ ಜಾರಿಕೊಳ್ಳುತ್ತಾರೆ. ಲೋಕಲ್ ಅಧಿಕಾರಿಗಳು ಎನ್ನುವ ದರ್ಪದಲ್ಲಿ ಇದ್ದು, ಸಾರ್ವಜನಿಕರಿಗೆ ಬೆದರಿಸುವ ಕೆಲಸ ಮಾಡುತ್ತಾರೆ. ಕರೆ ಮಾಡಿದರೆ ಕರೆ ಸ್ವೀಕರಿಸಲ್ಲಾ. ಕಾಮಗಾರಿ ಪ್ರಗತಿಯಲ್ಲಿರುವಾಗಲೇ ಬಂಡೆಗಳು ಹೊಡೆದು ಬೀಳುತ್ತಿದ್ದು, ಇದರಲ್ಲೇ ಕಾಮಗಾರಿ ಯಾವ ಸ್ವರೂಪದಲ್ಲಿ ಇದೆ ಎನ್ನುವುದು ಮೇಲ್ನೊಟಕ್ಕೆ ತಿಳಿಯಲಿದೆ. ಗುತ್ತಿಗೆದಾರರು ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾಮಗಾರಿ ಕೈಗೊಂಡಿಲ್ಲಾ. ಈ ಕುರಿತು ತನಿಖೆ ಆಗಬೇಕು ಇಲ್ಲವೇ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟಕ್ಕೆ ಸಿದ್ಧ ಎಂದು ದಲಿತ ಮುಖಂಡ ಶರಣು ಸಗರ ಹೇಳಿದರು.
