Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಂಬಿಗರ ಶರಣ ಸಂಸ್ಕೃತಿ ಉತ್ಸವಕ್ಕೆ ದಿನಾಂಕ ಫಿಕ್ಸ್
  • State
  • ಶಹಾಪುರ

ಅಂಬಿಗರ ಶರಣ ಸಂಸ್ಕೃತಿ ಉತ್ಸವಕ್ಕೆ ದಿನಾಂಕ ಫಿಕ್ಸ್

Praja Vahini December 15, 2025 1 minute read
WhatsApp Image 2025-12-15 at 17.27.38
Spread the love

ಶಹಾಪುರ: ಹಾವೇರಿ ಜಿಲ್ಲೆಯ ಸುಕ್ಷೇತ್ರ ನರಸೀಪುರದ ಕಂಚಾರಗಟ್ಟಿ (ಚೌಡಯ್ಯದಾನಪುರ) ದಲ್ಲಿ ಬರುವ ಜನವರಿ 14,15 ರಂದು ಅಂಬಿಗರ 10ನೇ ಶರಣ ಸಂಸ್ಕೃತಿ ಉತ್ಸವ ವಚನ ಗ್ರಂಥ ಮಹಾ ರಥೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ನರಸೀಪುರ ನಿಜಶರಣ ಅಂಬಿಗರ ಚೌಡಯ್ಯ ಗುರು ಪೀಠದ ಪೀಠಾಧಿಪತಿ ಜಗದ್ಗುರು ಪೂಜ್ಯ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ತಿಳಿಸಿದರು.

ನಗರದ ಅಂಬಿಗರ ಚೌಡಯ್ಯ ಮಠ ಹಳಿಸಗರನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಅವರು, ಜ.14 ರಂದು ಕಾರ್ಯಕ್ರಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಶಿಲಾಮಂಟಪ, ಕಂಚಿನ ಪುತ್ಥಳಿ ಲೋಕಾರ್ಪಣೆ ಹಾಗೂ ಮಹರ್ಷಿ ವೇದವ್ಯಾಸ ಕಲ್ಯಾಣ ಮಂಟಪ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ನೇರವೇರಿಸುವರು ಎಂದು ವಿವರಿಸಿದರು.

ಜ.14 ರಂದು ನಿಜಶರಣ ಅಂಬಿಗರ ಚೌಡಯ್ಯನವರ ತೊಟ್ಟಿಲೋತ್ಸವ ಐಕ್ಯ ಮಂಟಪ ಪೂಜೆ, ಸಾಮೂಹಿಕ ರಕ್ಷದಾನ ಶಿಬಿರ, ಸರಳ ಸಾಮೂಹಿಕ ವಿವಾಹ ಮಹೋತ್ಸವ, ಶಾಂತಮುನಿ ಸ್ವಾಮೀಜಿ 10ನೇ ಸ್ಮರಣೋತ್ಸವ , ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ವಚನ ಕಂಠಪಾಠ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಸಂಜೆ ಗಂಗಾರತಿ ಹಾಗೂ ಜಾನಪದ ಸಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ ಎಂದು ಮಾಹಿತಿ ಹಂಚಿಕೊಂಡರು.

ಜ.15ರಂದು ಧರ್ಮ ಧ್ವಜಾರೋಹಣ, ಧರ್ಮಸಭೆ, ನಿಜಶರಣ ಅಂಬಿಗರ ಚೌಡಯ್ಯನವರ ಶಿಲಾಮಂಟಪ, ಕಂಚಿನ ಪುತ್ಥಳಿ, ಮಹರ್ಷಿ ವೇದವ್ಯಾಸ ಕಲ್ಯಾಣ ಮಂಟಪ ಉದ್ಘಾಟನೆ, ಚೌಡಯ್ಯನವರ ೯೦೬ನೇ ಜಯಂತಿ ಉತ್ಸವ , ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಪೀಠಾರೋಹಣ ದಶಮಾನೋತ್ಸವ , ವಚನ ಗ್ರಂಥ ಮಹಾ ರಥೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಯಶಸ್ವಿಗೊಳಿಸಿ

ಪ್ರತಿ ವರ್ಷದಂತೆ ಈ ವರ್ಷವೂ ಜಾತ್ರಾ ಮಹೋತ್ಸವ ಸಂಭ್ರಮದಿಂದ ನೆರವೇರಲಿದ್ದು, ಕಾರ್ಯಕ್ರಮದಲ್ಲಿ ನಾಡಿನ ಪ್ರಮುಖ ಮಠಾಧೀಶರು, ಸಂತರು, ಶರಣರು, ಮಹಾತ್ಮರು, ಸಾಹಿತಿಗಳು, ಮುಖ್ಯಮಂತ್ರಿಗಳು, ಕೇಂದ್ರದ ಮಂತ್ರಿಗಳು, ರಾಜ್ಯದ ಮಂತ್ರಿಗಳು, ವಿರೋಧ ಪಕ್ಷದ ನಾಯಕರು, ಲೋಕಸಭಾ ಸದಸ್ಯರು, ಶಾಸಕರು ಸಮಾಜದ ರಾಷ್ಟ್ರಮಟ್ಟದ, ರಾಜ್ಯಮಟ್ಟದ ನಾಯಕರು ಪಾಲ್ಗೊಲಿದ್ದು ರಾಜ್ಯದ ವಿವಿಧ ಜಿಲ್ಲೇಗಳು, ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿ. ಎಂದು ಜಗದ್ಗುರು ಪೂಜ್ಯ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಅಂಬಿಗರ ಚೌಡಯ್ಯ ಗುರು ಪೀಠದ ಪೀಠಾಧಿಪತಿ ಹೇಳಿದರು. ಇದನ್ನೂ ಓದಿ: ಸರ್ಕಾರಿ ಆಸ್ಪತ್ರೆಯ ವೈದ್ಯರಲ್ಲಿ ಸೇವಾ ಮನೋಭಾವ ಇರಲಿ

ಈ ಸಂದರ್ಭದಲ್ಲಿ ಸಮಾಜದ ಹಿರಿಯರಾದ ಅಯ್ಯಣ್ಣ ಕನ್ಯಾಕೊಳ್ಳೂರ, ಬಸವರಾಜ ಸಪ್ಪನಗೊಳ, ಸಣ್ಣ ನಿಂಗಣ್ಣ ನಾಯ್ಕೊಡಿ, ಮೊನಪ್ಪ ಶಿರವಾಳ, ರಾಯಪ್ಪ ಸಾಲಿಮನಿ, ರಾಮಣ್ಣ ನಾಯ್ಕೋಡಿ, ಮಹಾದೇವಪ್ಪ ಸಾಲಿಮನಿ, ಗೋಪಾಲ ಹಳಿಸಗರ, ಬಸ್ಸು ರತ್ತಾಳ, ನಾಗಪ್ಪ ತಹಸೀಲ್ದಾರ, ಮಲ್ಲೇಶಿ ಮಮದಾಪುರ, ಯಲ್ಲಪ್ಪ ನಾಯ್ಕೋಡಿ, ನಾಗೇಂದ್ರಪ್ಪ ಇಟಗಿ, ಭೀಮಣ್ಣ ಶಖಾಪುರ, ಮೌನೇಶ ಹಳಿಸಗರ, ಮಲ್ಲರೆಡ್ಡಿ ವಿಭೂತಿಹಳ್ಳಿ ಸೇರಿದಂತೆ ಯುವಕರು ಇದ್ದರು.

 

About the Author

Praja Vahini

Editor

View All Posts

Spread the love

Post navigation

Previous: ಜನಸೇವೆಯೇ ಶಿವಶಂಕರಪ್ಪ ಅವರು ಧ್ಯೇಯವಾಗಿತ್ತು: ಕೆಹೆಚ್.ಮುನಿಯಪ್ಪ
Next: ಶಾಮನೂರು ಶಿವಶಂಕರಪ್ಪನವರ ಅಂತಿಮ ದರ್ಶನ ಪಡೆದ ಸಿಎಂ

Views:

109

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.