ಮಂಡ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು (ಮಂಗಳವಾರ ಡಿ. 16) ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿದ್ದು, ಮಳವಳ್ಳಿ ಪಟ್ಟಣದಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶ್ರೀವಯೋಗಿಗಳ 1066ನೇ ಜಯಂತಿ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ.
ಮಳವಳ್ಳಿ ಪಟ್ಟಣದ ಶಾಂತಿ ಕಾಲೇಜು ಮುಂಭಾಗದಲ್ಲಿ ನಡೆಯಲಿರುವ ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಭಾಗಿಯಾಗಲಿದ್ದಾರೆ. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಇಂದಿನಿಂದ ಡಿ.22ರವರೆಗೆ 7 ದಿನಗಳ ಕಾಲ ಬೃಹತ್ ಸಮಾರಂಭ ನಡೆಯಲಿದೆ. ರಾಷ್ಟ್ರಪತಿಗಳ ಆಗಮನದ ಹಿನ್ನೆಲೆ ಮಳವಳ್ಳಿಯಲ್ಲಿ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಹೆಚ್ ಡಿಕೆಗೆ ಬರ್ತಡೇ ವಿಶ್ ಮಾಡಿದ ಶರವಣ
