Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ: ಸಿಎಂ ಸಿದ್ದು
  • Bangalore
  • State
  • ಬೆಳಗಾವಿ

“ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ: ಸಿಎಂ ಸಿದ್ದು

Praja Vahini December 16, 2025
WhatsApp Image 2025-12-16 at 12.37.58
Spread the love

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಮಾತು ಅಂತಿಮವಾಗಿರುತ್ತದೆ. ಆದರೆ ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. 5 ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಅವರು ಇಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ, ವಿರೋಧಪಕ್ಷದವರ ಪ್ರಶ್ನೆಗೆ ಉತ್ತರಿಸುತ್ತಾ ಮಾತನಾಡಿದ ಅವರು, 2013 ರಲ್ಲಿ 2023 ರಲ್ಲಿಯೂ  ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ. ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದೆ. “‘ನಾನು’ ಹೋದರೆ ಹೋದೇನು” ಅಂತ ಕನಕದಾಸರು ಹೇಳಿದ್ದರು. “ಇದು ನನ್ನ ಸರ್ಕಾರವಲ್ಲ, ನಮ್ಮ ಸರ್ಕಾರ”. ಈಗಲೂ ನಾನೇ ಮುಖ್ಯಮಂತ್ರಿ. ಹೈಕಮಾಂಡ್ ಹೇಳುವ ತನಕವೂ ನಾನೇ ಮುಖ್ಯಮಂತ್ರಿ ಎಂದು ತಿಳಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಭೇಟಿ

2023 ರಂತೆ 2028 ರಲ್ಲಿಯೂ ಜನಾರ್ಶೀವಾದದೊಂದಿಗೆ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಸದಾ ವಿರೋಧಪಕ್ಷದ ಸ್ಥಾನದಲ್ಲಿಯೇ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯುವರು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. 5 ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.

ಜನರ ನಾಡಿಮಿಡಿತ ಕಾಂಗ್ರೆಸ್ ಸರ್ಕಾರಕ್ಕೆ ತಿಳಿದಿದೆ

2023 ರಲ್ಲಿ ಜನರು ಆಶೀರ್ವಾದ ಮಾಡಿದಂತೆ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಆಡಳಿತಕ್ಕೆ ಬರಲಿದೆ. ಜನರ ನಾಡಿಮಿಡಿತ ಸರ್ಕಾರಕ್ಕೆ ತಿಳಿದಿದೆ. ಕರ್ನಾಟಕದ ಜನ ಬಿಜೆಪಿಗೆ ಎಂದಿಗೂ ಅಧಿಕಾರಕ್ಕೆ ತರುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ 2 ಬಾರಿ ಅಧಿಕಾರ ನಡೆಸಿದರೂ, ಒಂದು ಬಾರಿಯೂ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ. 2008, 2018 ರಲ್ಲಿ ಆಪರೇಷನ್ ಕಮಲ ಮಾಡಿ, ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಆಶೀರ್ವಾದ ಮಾಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. 2019 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬಾರದೆಂಬ ಉದ್ದೇಶದಿಂದ ಜೆಡಿಎಸ್ ನೊಂದಿಗೆ ಸರ್ಕಾರ ರಚಿಸಲಾಯಿತು. ಆದರೆ ಬಿಜೆಪಿಯವರು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಉದ್ದೇಶದ ಬಗ್ಗೆ ಪ್ರಶ್ನಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಭೇಟಿ
Next: ಅಂಡರ್ ಪಾಸ್ ಕಾಮಗಾರಿಯನ್ನು ಪಿಜಿಬಿ ಎಂಬ ಗುತ್ತಿಗೆದಾರ ಸಂಸ್ಥೆಗೆ ನೀಡಿದ್ದೇವೆ: ಡಿಕೆಶಿ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.