Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ವಿರುದ್ಧ ಕ್ರಮ: ಕೆ. ಜೆ.ಜಾರ್ಜ್
  • Uncategorized

ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ವಿರುದ್ಧ ಕ್ರಮ: ಕೆ. ಜೆ.ಜಾರ್ಜ್

Praja Vahini December 16, 2025 1 minute read
WhatsApp Image 2025-12-16 at 12.05.10
Spread the love

ಬೆಳಗಾವಿ: ರಾಜ್ಯದಲ್ಲಿ ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ಪ್ರಕರಣಗಳನ್ನು ಪತ್ತೆಹಚ್ಚಲು ಮತ್ತು ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲು ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಜಾಗೃತದಳ (ವಿಜಿಲೆನ್ಸ್) ಘಟಕವನ್ನು ಪೋಲೀಸ್ ಅಧೀಕ್ಷಕರು/ ಪೋಲೀಸ್ ಉಪ ಅಧೀಕ್ಷಕರು ಹಾಗೂ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಅವರ ನೇತೃತ್ವದಲ್ಲಿ ರಚಿಸಲಾಗಿದೆ ಹಾಗೂ ಪ್ರತಿ ಜಿಲ್ಲಾಮಟ್ಟದಲ್ಲಿ ಜಾಗೃತದಳ ಪೋಲೀಸ್ ಠಾಣೆಗಳಲ್ಲಿ ಪೋಲೀಸ್ ಇನ್ಸ್‍ಪೆಕ್ಟರ್/ ಸಬ್-ಇನ್ಸ್‍ಪೆಕ್ಟರ್‍ರೊಂದಿಗೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಮತ್ತು ಪೋಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಜಾಗೃತದಳವು ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ತಿಳಿಸಿದರು.

ವಿಧಾನ ಪರಿಷತ್ ನಲ್ಲಿ ಇಂದು (ಮಂಗಳವಾರ ಡಿ. 16) ಮಾತನಾಡಿದ ಅವರು, ಜಾಗೃತದಳವು ನಿಯಮಿತವಾಗಿ ಕಾಲ-ಕಾಲಕ್ಕೆ ತಪಾಸಣೆ/ಅನಿರೀಕ್ಷಿತ ದಾಳಿ ನಡೆಸುವ ಮೂಲಕ ವಿದ್ಯುತ್ ಕಳ್ಳತನ/ವಿದ್ಯುತ್ ದುರ್ಬಳಕೆ ಪ್ರಕರಣಗಳನ್ನು ತಡೆಗಟ್ಟಲು ಕ್ರಮ ವಹಿಸುತ್ತಿದ್ದು, ವಿದ್ಯುತ್ ಕಳ್ಳತನ ಕಂಡುಬಂದ ತಕ್ಷಣ ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿಗಳ ಸಿಬ್ಬಂದಿಗಳ ಮೂಲಕ ವಿದ್ಯುತ್ ನಿಲುಗಡೆಗೊಳಿಸಿ ನಿಯಮಾನುಸಾರ ಪ್ರಕರಣವನ್ನು ದಾಖಲಿಸುತ್ತಿದೆ. ಅಲ್ಲದೆ ಪ್ರತಿ ಪೆÇಲೀಸ್ ಠಾಣಾ ಮಟ್ಟದಲ್ಲಿ ವಿಶೇಷ ದಾಳಿದಳಗಳನ್ನು ಸಹ ರಚಿಸಿ ಸಾಮೂಹಿಕ ತಪಾಸಣೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಳ್ಳತನ/ದುರ್ಬಳಕೆ ಕಂಡುಬಂದರೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: 2334 ಕಂಪೆನಿಗಳ ವಿರುದ್ಧ ಪ್ರಕರಣ ದಾಖಲು: ಕೆಹೆಚ್. ಮುನಿಯಪ್ಪ

ಭಾರತೀಯ ವಿದ್ಯುಚ್ಛಕ್ತಿ ಕಾಯಿದೆ 2003 ರ ಸೆಕ್ಷನ್ 126 ಮತ್ತು 135 ರ ಅಡಿಯಲ್ಲಿ ಕ್ರಮವಾಗಿ ಅಸಂಜ್ಞೆಯ (Non Cognizabl) ಹಾಗೂ ಸಂಜ್ಞೆಯ (Cognizable) ಪ್ರಕರಣಗಳನ್ನು ಜಾಗೃತದಳ ಪೆÇಲೀಸ್ ಠಾಣೆಗಳಲ್ಲಿ ದಾಖಲಿಸಿ, ತನಿಖೆ ನಡೆಸಿ, ಕೆ.ಇ.ಆರ್.ಸಿ. ಸೂಚಿಸಿರುವ ವಿದ್ಯುತ್ ಸರಬರಾಜು ನಿಬಂಧನೆಗಳ ಪ್ರಕಾರ ದಂಡ ವಿಧಿಸಲಾಗುತ್ತಿದೆ.

ಸೆಕ್ಷನ್ 135 ಅಡಿಯಲ್ಲಿ ದಾಖಲಾಗುವ ಪ್ರಕರಣಗಳನ್ನು ವಿಶೇಷ ನ್ಯಾಯಾಲಯಗಳಲ್ಲಿ ವಿಚಾರಣೆಗೊಳಪಡಿಸಲಾಗುತ್ತದೆ ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: 2334 ಕಂಪೆನಿಗಳ ವಿರುದ್ಧ ಪ್ರಕರಣ ದಾಖಲು: ಕೆಹೆಚ್. ಮುನಿಯಪ್ಪ
Next: ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.