ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ ಸಲ್ಲಿಸಿದ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯವು (ಟ್ರಯಲ್ ಕೋರ್ಟ್) ತಿರಸ್ಕರಿಸಿರುವುದು ಪ್ರಧಾನಿ Narendra Modi ಅವರ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡು ರಾಜಕೀಯ ವಿರೋಧಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎನ್ನುವುದನ್ನು ಮತ್ತೊಮ್ಮೆ ಜಗಜ್ಜಾಹೀರಾಗಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಸುವರ್ಣಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡು ಮಾತನಾಡಿದರು. ಇದನ್ನೂ ಓದಿ: ರಬ್ಬರ್ ಬೆಳೆಯನ್ನು ತೋಟಗಾರಿಕೆ ಇಲಾಖೆ ವ್ಯಾಪ್ತಿಗೆ ಒಳಪಡಿಸುವ ಪ್ರಸ್ತಾವನೆ ಇಲ್ಲ: ಸಂತೋಷ್ ಲಾಡ್
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೇರಿ ಎಲ್ಲಾ ಸಚಿವರು ಮತ್ತು ಶಾಸಕರುಗಳು ಪ್ರತಿಭಟನೆಯಲ್ಲಿ ಭಾಗವಹಿಸಿ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ಹಾಳುಗೆಡವುತ್ತಿರುವುದರ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟಿಸಿದರು.
