ಬೆಳಗಾವಿ: ಸೋಲಾರ್ ಹಾಗೂ ವಿಂಡ್ ಸೇರಿದಂತೆ ಹೈಬ್ರಿಡ್ ವಿದ್ಯುತ್ ಉತ್ಪಾದನೆಗೆ ಸರ್ಕಾರ ಆದ್ಯತೆ ನೀಡಿದೆ. ಸದ್ಯ ರಾಜ್ಯದಲ್ಲಿ 7,300 ಮೆಗಾವ್ಯಾಟ್ ಪವನ ವಿದ್ಯುತ್ ಉತ್ಪಾದನೆಯಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿಇಂದು (ಗುರುವಾರ ಡಿ. 18) ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಕುಷ್ಟಗಿ ವಿಧಾನ ಸಭಾ ಕ್ಷೇತ್ರದಲ್ಲಿ 41 ಯೋಜನೆಗಳ 213 ವಿಂಡ್ ಟರ್ಬೈನ್‍ಗಳಿಂದ 433.12 ಮೆಗಾವ್ಯಾಟ್ ಸಾಮಾಥ್ರ್ಯದ ಪವನ ವಿದ್ಯುತ್ ಯೋಜನೆಗಳು ಅನುಷ್ಠಾನಗೊಂಡಿವೆ. 2022-23 ರಿಂದ 2025-26 ನವೆಂಬರ್ ಅಂತ್ಯದವರೆಗೆ 1394 ಮೆಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳು ಹಂಚಿಕೆಯಾಗಿವೆ. ಇದರಲ್ಲಿ 57 ಮೆಗಾವ್ಯಾಟ್ ಸಾಮಥ್ರ್ಯದ ಯೋಜನೆಗಳು ಅನುಷ್ಠಾನಗೊಂಡಿವೆ. 1337 ಮೆಗಾವ್ಯಾಟ್ ಸಾಮಥ್ರ್ಯದ ಯೋಜನೆಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ. ಈ ಯೋಜನೆಗಳಿಗೆ ಬೇಕಾಗಿರುವ ಜಮೀನುಗಳನ್ನು ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ಮತ್ತು ಅದರ ಪರಿಷ್ಕರಣೆಯನ್ವಯ ಸೆಕ್ಷನ್ 109ರ ಅಡಿಯಲ್ಲಿ ಅವಕಾಶ ಕಲ್ಪಿಸಿದಂತೆ ಸಂಬಂಧಿಸಿದ ಇಲಾಖೆ ಅಥವಾ ಭೂ ಮಾಲೀಕರಿಂದ ಜಮೀನು ಗುತ್ತಿಗೆ ಅಥವಾ ಕ್ರಯಕ್ಕೆ ಪಡೆಯುವುದು ಸಂಬಂದಪಟ್ಟ ಕಂಪನಿಗಳದ್ದಾಗಿದೆ. ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ. ವಿಂಡ್ ಟರ್ಬೈನ್ ಅಳವಡಿಸಲು ಖಾಸಗಿ ಕಂಪನಿಗಳು ದೊಡ್ಡಗಾತ್ರ ವಾಹನಗಳನ್ನು ಬಳಿಸಿ ಗ್ರಾಮೀಣ ರಸ್ತೆಗಳು ಹಾಳಾಗಿದ್ದರೆ, ಸಂಬಂದಪಟ್ಟ ಕಂಪನಿಗಳು ರಸ್ತೆ ನಿರ್ಮಿಸಿಕೊಡುವಂತೆ ಇಲಾಖೆಯಿಂದ ಸೂಚನೆ ನೀಡಲಾಗಿದೆ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
3 ವರ್ಷದಲ್ಲಿ 400 ಉಪವಿದ್ಯುತ್ ವಿತರಣಾ ಕೇಂದ್ರ ನಿರ್ಮಾಣಕ್ಕೆ ಯೋಜನೆ
ರಾಜ್ಯ ಸರ್ಕಾರ ಈಗಾಗಲೇ 100 ಉಪವಿದ್ಯುತ್ ವಿತರಣಾ ಕೇಂದ್ರಗಳನ್ನು ಹೊಸದಾಗಿ ನಿರ್ಮಿಸಿದೆ. ಮುಂಬರುವ 3 ವರ್ಷದಲ್ಲಿ 400 ಉಪವಿದ್ಯುತ್ ವಿತರಣಾ ಕೇಂದ್ರಗಳನ್ನು ನಿರ್ಮಿಸಿ, ರಾಜ್ಯದ ಮೂಲೆ ಮೂಲೆಗಳಿಗೂ ವಿದ್ಯುತ್ ಸರಬರಾಜು ಸಂಪರ್ಕ ಜಾಲ ಬಲಪಡಿಸಲಾಗವುದು ಎಂದು ಸಚಿವ ಕೆ.ಜೆ.ಜಾರ್ಜ್ ಇದೇ ವೇಳೆ ಸ್ಪಷ್ಟಪಡಿಸಿದರು. ಇದನ್ನೂ ಓದಿ: ನವನಗರದಲ್ಲಿ 200 ಎಕರೆ ಪ್ರದೇಶದಲ್ಲಿನ ವಸತಿ ನಿವೇಶಗಳನ್ನು ವಾಣಿಜ್ಯ ನಿವೇಶನಗಳನ್ನಾಗಿ ಪರಿವರ್ತನೆ ಮಾಡಲು ಪ್ರಸ್ತಾವನೆ
ರಾಜ್ಯದ ಎಲ್ಲೆಡೆ ಕೃಷಿಗೆ 7 ಗಂಟೆ ವಿದ್ಯುತ್ ನೀಡಲಾಗುತ್ತಿದೆ. ಇದನ್ನು ಹೊರತುಪಡಿಸಿ ಗೃಹ ಹಾಗೂ ಕೈಗಾರಿಕೆ ಸಂಪರ್ಕಗಳಿಗೆ ದಿನದ 24 ಗಂಟೆಯೂ ವಿದ್ಯುತ್ ನೀಡಲಾಗುತ್ತಿದೆ. ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಆಲ್ಲಾಪಟ್ಟಣ ಗ್ರಾಮದಲ್ಲಿ 220/66/ಕೆ.ವಿ. ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ, ಅಲ್ಲಾಪಟ್ಟಣ ಗ್ರಾಮದ ಸರ್ವೆ ನಂ.59 ರಲ್ಲಿ 7 ಎಕರೆ 10 ಗುಂಟೆ ಜಮೀನಿನ ಜೊತೆಗೆ ಅವಶ್ಯಕತೆ ಇದ್ದ 2 ಎಕರೆ 30 ಗುಂಟೆ ಜಮೀನುÀ ಮಂಜೂರಾತಿ ಹಾಸನ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಗೆ ಸಲ್ಲಿಸಿದ್ದಾರೆ. ಜಮೀನು ಹಸ್ತಾಂತರಗೊಳಿಸಿದ ಕೂಡಲೇ ಟೆಂಡರ್ ಕರೆದು ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಶಾಸಕ ಮಂಜು.ಎ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಎಂದು ಸಚಿವ ಕೆ.ಜೆ.ಜಾರ್ಜ್ ಉತ್ತರಿಸಿದರು.
