ಬೆಂಗಳೂರು: ಕನ್ನಡ ಚಿತ್ರರಂಗದ ಕೀರ್ತಿ ಪತಾಕೆಯನ್ನ ವಿಶ್ವಮಟ್ಟದಲ್ಲಿ ರಾರಾಜಿಸುವಂತೆ ಮಾಡಿರುವ ಬೆಂಗಳೂರಿನ ಯುವ ಪ್ರತಿಭೆ ನಿರ್ದೇಶಕಿ ಅನೂಯಾ ಸ್ವಾಮಿ ಅವರಿಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ತಿಳಿಸಿದ್ದಾರೆ. ‘ಪಂಕಜ’ ಎಂಬ ಕನ್ನಡ ಕಿರುಚಿತ್ರ ವಿಶ್ವವಿಖ್ಯಾತ ‘ ಸನ್‌ಡಾನ್ಸ್ ಫಿಲ್ಮ್ ಫೆಸ್ಟಿವಲ್’ಗೆ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದೆ. ಈ ಬೆನ್ನಲ್ಲೇ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅನೂಯ ಸ್ವಾಮಿ ಅವರ ಈ ಸಾಧನೆಗೆ 7 ಕೋಟಿ ಕನ್ನಡಿಗರ ಪರವಾಗಿ ಅಭಿನಂದನೆ ತಿಳಿಸಿದ್ದಾರೆ. ತಮ್ಮ ಎಕ್ಸ್ ಖಾತೆಯಲ್ಲಿ ಅನೂಯ ಸ್ವಾಮಿ ಅವರ ಭಾವಚಿತ್ರ ಹಾಕಿ ಶುಭಹಾರೈಸಿದ್ದಾರೆ. ಇದನ್ನೂ ಓದಿ: ಸನ್ ಡಾನ್ಸ್ ಫಿಲ್ಮ್ ಫೆಸ್ಟಿವಲ್ ಗೆ ಆಯ್ಕೆಯಾದ ಹೆಮ್ಮೆಯ ಕನ್ನಡತಿ ಅನುಯಾ ಸ್ವಾಮಿ
ಈ ಕುರಿತು ಟ್ವೀಟ್ ಮಾಡಿರುವ ಅವರು, ಪಂಕಜ ಕಿರುಚಿತ್ರದ ಮೂಲಕ ಐತಿಹಾಸಿಕ ಸನ್‌ಡಾನ್ಸ್ ಚಲನಚಿತ್ರೋತ್ಸವಕ್ಕೆ ಪಾದಾರ್ಪಣೆ ಮಾಡಿದ ಅನೂಯಾ ಸ್ವಾಮಿಗೆ ಹೃತ್ಪೂರ್ವಕ ಅಭಿನಂದನೆಗಳು. ಸನ್‌ಡಾನ್ಸ್ ಚಲನ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿರುವ ಮೊದಲ ಕನ್ನಡ ಚಲನಚಿತ್ರ ಇದಾಗಿದೆ. ಯುವ ನಿರ್ದೇಶಕಿ ಎಂಬ ಹೆಗ್ಗಳಿಕೆಗೆ ಪಾತ್ರರಾಗುವುದು ಕರ್ನಾಟಕ ಮತ್ತು ಭಾರತೀಯ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣವಾಗಿದೆ. ಜಾಗತಿಕ ವೇದಿಕೆಗೆ ಅವರು ಪ್ರಬಲ ಕಥೆಗಳನ್ನು ತರುತ್ತಿರುವುದರಿಂದ ಅವರ ಯಶಸ್ಸು ಮುಂದುವರಿಯಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
