ಗುವಾಹಟಿ: ಇಂದು ಬೆಳ್ಳಂಬೆಳಗ್ಗೆ (ಶನಿವಾರ ಡಿ. 20) ಗುಹಾಟಿಯ ಅಸ್ಸಾಂನಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ಡಿಕ್ಕಿ ಹೊಡೆದಾ ಪರಿಣಾಮ ಎಂಟು ಆನೆಗಳು ಸಾವನ್ನುಪ್ಪಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಅಲ್ಲದೆ ಈ ಘಟನೆಯಲ್ಲಿ 1 ಮರಿಯಾನಿಗೆ ಗಂಭೀರವಾಗಿ ಗಾಯವಾಗಿದೆ ಎಂದು ತಿಳಿದುಬಂದಿದೆ.
ಹೌದು, ರಾಜಧಾನಿ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು 8 ಆನೆಗಳು ಸಾವನ್ನಪ್ಪಿರುವ ಘಟನೆ ನಡೆದಿದೆದಿದ್ದು,ಈ ದುರ್ಘಟನೆಯಿಂದ ರೈಲಿನ 5 ಬೋಗಿಗಳು ಹಾಗೂ ರೈಲಿನ ಎಂಜಿನ್ ಹಳಿ ತಪ್ಪಿದ್ದು, ರೈಲು ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಈಶಾನ್ಯ ಗಡಿನಾಡು ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಕೌಶಲ್ಯ ಇಲಾಖೆಯಲ್ಲಿ ಕಾಸು ನುಂಗುವ ಕರಾಮತ್ತು; ಕಣ್ಮುಚ್ಚಿ ಕುಳಿತಿದ್ದಾರಾ ಸಚಿವರು?
ಸೈರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್ ರೈಲು ಮಿಜೋರಾಂನ ಸೈರಂಗ್ (ಐಜಾಲ್ ಬಳಿ) ನಿಂದ ದೆಹಲಿಯ ಆನಂದ್ ವಿಹಾರ್ ಟರ್ಮಿನಲ್ ವರೆಗೆ ತೆರಳುತ್ತಿದ್ದ ಮೇಳೆ ನಸುಕಿನ ಜಾವ 2:17ರ ವೇಳೆಗೆ ಘಟನೆ ನಡೆದಿದೆ. ಘಟನೆ ಬಳಿಕ ಹಲವಾರು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಇನ್ನು ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.
