ಬೆಂಗಳೂರು: ಚೈತ್ರ ಕುಂದಾಪುರವರು ಈಗಾಗಲೇ ಹಲವಾರು ವಿವಾದಗಳಿಗೆ ಸುದ್ದಿಯಾಗಿದ್ದ ಅವರು ಮತ್ತೆ ಇದೀಗ ಸುದ್ದಿಯಾಗಿದ್ದಾರೆ.
ಹೌದು, ಕನ್ನಡ ಬಿಗ್ ಬಾಸ್ ಸೀಸನ್ 12ರಲ್ಲಿ ಸ್ಪರ್ಧಿಯಾಗಿರುವ ಚೈತ್ರಾಕುಂದಾಪುರ ಅವರಿಗೆ ಅವರ ತಂದೆಗೆ ಚೈತ್ರಾ ಕುಂದಾಪುರವರ ಮೇಲೆ ದೂರು ದಾಖಲಿಸಿದ್ದಾರೆ. ಚೈತ್ರಾ ಕುಂದಾಪುರ ಹಾಗೂ ಅವರ ತಾಯಿ ಸೇರಿಕೊಂಡು ಅವರ ತಂದೆ ಯಾದ ಬಾಲಕೃಷ್ಣ ನಾಯಕ್ ಅವರಿಗೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನಾಗರಿಕರ ನ್ಯಾಯಾಲಯ ಮಹತ್ವದ ನಿರ್ದೇಶನ ನೀಡಿದೆ. ಚೈತ್ರಾ ಅವರ ತಂದೆ ಬಾಲಕೃಷ್ಣ ನಾಯ್ಕ್ ಅವರು, ಪತ್ನಿ ಹಾಗೂ ಮಗಳಿಂದ ತಮಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿ ಹಿರಿಯ ನಾಗರಿಕರ ನ್ಯಾಯಾಲಯವನ್ನು ಮೊರೆ ಹೋಗಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಚೈತ್ರಾ ಕುಂದಾಪುರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಕುಂದಾಪುರ ಪೊಲೀಸರಿಗೆ ಸೂಚನೆ ನೀಡಿದೆ. ಇದನ್ನೂ ಓದಿ: ರಾಜಧಾನಿ ಎಕ್ಸ್ಪ್ರೆಸ್ ರೈಲು ಅಪಘಾತ 8 ಆನೆಗಳ ಮರಣ
ನ್ಯಾಯಾಲಯದ ಆದೇಶದಲ್ಲಿ, “ಬಾಲಕೃಷ್ಣ ನಾಯ್ಕ್ ಅವರಿಗೆ ಯಾವುದೇ ರೀತಿಯ ದೈಹಿಕ ಅಥವಾ ಮಾನಸಿಕ ಕಿರುಕುಳ ನೀಡಬಾರದು. ಅವರು ತಮ್ಮ ಮನೆಯಲ್ಲಿ ನಿರ್ಭೀತಿಯಿಂದ ವಾಸಿಸುವಂತೆ ಅನುವು ಮಾಡಿಕೊಡಬೇಕು” ಎಂದು ಸ್ಪಷ್ಟಪಡಿಸಲಾಗಿದೆ. ಅಲ್ಲದೆ, ಈ ಕುರಿತು ಚೈತ್ರಾ ಕುಂದಾಪುರ ಅವರಿಂದ ಸೂಕ್ತ ಮುಚ್ಚಳಿಕೆ ಪಡೆಯುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
ಈ ಪ್ರಕರಣದಲ್ಲಿ ಬಾಲಕೃಷ್ಣ ನಾಯ್ಕ್ ಅವರಿಗೆ ಕರ್ನಾಟಕ ಪೋಷಕರು ಮತ್ತು ಹಿರಿಯ ನಾಗರಿಕರ ಪಾಲನೆ ಮತ್ತು ಕಲ್ಯಾಣ ಕಾಯ್ದೆಯ ಅಡಿಯಲ್ಲಿ ರಕ್ಷಣೆ ನೀಡಲಾಗಿದೆ. ಇದರ ಅನ್ವಯ ಕುಂದಾಪುರ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
