ಬೆಂಗಳೂರು: ಬೆಂಗಳೂರು ನಗರದಲ್ಲಿ ಸರ್ಕಾರದ ಜಾಗವನ್ನು ಒತ್ತುವರಿ ಮಾಡಿಕೊಂಡು ಅದರ ಮೇಲೆ ನಿವೇಶನ ಕಟ್ಟುವುದು ಇತ್ತೀಚಿಗೆ ಕಂಡು ಬರುತ್ತಿದ್ದು, ಅಕ್ರಮವಾಗಿ ಮನೆಗಳನ್ನು ಕಟ್ಟಿರುವ ಅವರ ವಿರುದ್ಧ ಕ್ರಮ ಕೈಗೊಂಡು ಇದೀಗ ಬೆಂಗಳೂರು ನಗರದಲ್ಲಿ ಜೆಸಿಬಿ ಮೂಲಕ ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಮನೆಗಳನ್ನು ಜೆಸಿಬಿ ಮೂಲಕ ತೆರವುಗೊಳಿಸುವ ಕಾರ್ಯಚರಣೆಗೆ ಜಿಲ್ಲಾಡಳಿತ ಮುಂದಾಗಿದೆ. ಇದನ್ನೂ ಓದಿ: ಚೈತ್ರಾ ಕುಂದಾಪುರಗೆ ಬಂತು ಕುತ್ತು; ಸ್ವಂತ ತಂದೆಯೇ ದೂರು ನೀಡಿದ್ಯಾಕೆ?
ಹೌದು, ರಾಜ್ಯದ ರಾಜಧಾನಿ ಬೆಂಗಳೂರು ನಗರದಲ್ಲಿ ಮತ್ತೆ ಜೆಸಿಬಿ ಗರ್ಜನೆ ಮಾಡಿದ್ದು ಪೊಲೀಸ್ ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಜಿಲ್ಲಾಡಳಿತ ತೆರವು ಕಾರ್ಯಾಚರಣೆ ನಡೆಸುತ್ತಿದೆ. ಶ್ರೀನಿವಾಸಪುರದ ಕೋಗಿಲು ಲೇಔಟ್ನಲ್ಲಿರುವ ಈ ಗೋಮಾಳ ಜಾಗವನ್ನ ಜಿಲ್ಲಾಡಳಿತ ನಗರ ಪಾಲಿಕೆಗೆ ನೀಡಿತ್ತು. ಆದರೆ ಜಾಗವನ್ನ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಮನೆ ನಿರ್ಮಿಸಲಾಗಿತ್ತು. ಹೀಗಾಗಿ ಒತ್ತುವರಿ ಮಾಡಿ ನಿರ್ಮಿಸಲಾಗಿರುವ 200 ಮನೆಗಳನ್ನ ನೆಲಸಮಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.
