Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾನು ಕದ್ದುಮುಚ್ಚಿ ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ: ಡಿಕೆಶಿ
  • Bangalore
  • Politics
  • State

ನಾನು ಕದ್ದುಮುಚ್ಚಿ ದೆಹಲಿಗೆ ಹೋಗುವ ಅವಶ್ಯಕತೆ ಇಲ್ಲ: ಡಿಕೆಶಿ

Praja Vahini December 20, 2025
WhatsApp Image 2025-12-20 at 15.03.37
Spread the love

ಬೆಂಗಳೂರು: ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಹಾಕಿದ್ದ ಚಾರ್ಜ್ ಶೀಟ್ ಕೋರ್ಟ್ ನಲ್ಲಿ  ತಿರಸ್ಕೃತಗೊಂಡಿದ್ದು, ಈಗ ಒಂದು ಎಫ್ಐಆರ್ ಬಾಕಿ ಉಳಿದುಕೊಂಡಿದೆ. ನಮ್ಮ ಮೇಲೆ ಯಾವ ರೀತಿ ದಬ್ಬಾಳಿಕೆ ನಡೆಯುತ್ತಿದೆ ಎಂದು ತಿಳಿಸಲು ನಾವು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.

ವಿಧಾನ ಮಂಡಲ ಅಧಿವೇಶನದ ಬಳಿಕ ನೀವು ಮತ್ತು ಸಿಎಂ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಎಂದು ಚರ್ಚೆ ಇದೆಯಲ್ಲ. ಆ ರೀತಿ ಇದ್ದರೆ ನಿಮಗೂ ತಿಳಿಸುತ್ತೇವೆ. ನಿಮಗೆ ತಿಳಿಸದೇ ಏನೂ ಮಾಡುವುದಿಲ್ಲ. ನಾನು ಕದ್ದುಮುಚ್ಚಿ ಹೋಗುವುದಿಲ್ಲ ಎಂದರು.

ಮಂಗಳವಾರ ದೆಹಲಿಗೆ ಪ್ರಯಾಣ

ನಾನು ಮಂಗಳವಾರ ದೆಹಲಿಗೆ ಹೋಗುತ್ತಿದ್ದು, ಆಗ ದೆಹಲಿ ಪೊಲೀಸರನ್ನು ಭೇಟಿ ಮಾಡುವೆ. ಅಂದು ಕೇಂದ್ರ ಜಲಶಕ್ತಿ ಸಚಿವರು ನದಿ ಜೋಡಣೆ ವಿಚಾರವಾಗಿ ಸಭೆ ಕರೆದಿದ್ದಾರೆ. ಅಂದು ನಮ್ಮ ರಾಜ್ಯದ ಪ್ರಮುಖ ಯೋಜನೆಗಳಾದ ಮಹದಾಯಿ, ಕೃಷ್ಣ ಮೇಲ್ದಂಡೆ, ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಚರ್ಚೆ ಮಾಡುವೆ. ಇದೇ ವೇಳೆ ಕೇಂದ್ರ ಅರಣ್ಯ ಸಚಿವರು, ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿರುವೆ. ರಾಜ್ಯದ ಹಿತಾಸಕ್ತಿ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಲು ತೀರ್ಮಾನಿಸಿರುವೆ. ರಾಜ್ಯದ ಸಂಸದರ ಜೊತೆಗೆ ಭೇಟಿಯಾಗುವ ಆಲೋಚನೆ ಇತ್ತು. ಇವೆಲ್ಲ ಆದ ನಂತರ ಅವರು ಬಂದರೆ ಪ್ರಧಾನಮಂತ್ರಿಗಳನ್ನೂ ಭೇಟಿ ಮಾಡುವೆ ಎಂದು ತಿಳಿಸಿದರು. ಇದನ್ನೂ ಓದಿ: ಬಂಧನ ಭೀತಿಯಿಂದ ತಲೆ ಮರ್ಸ್ಕೊಂಡ್ರ ಬೈರತಿ ಬಸವರಾಜ್

ನಾಗಸಾಧುಗಳು ಮನೆ ಹುಡುಕಿಕೊಂಡು ಬಂದು ಆಶೀರ್ವಾದ ಮಾಡಿದ್ದಾರೆ. ಮನೆಗೆ ಬಂದವರನ್ನು ಬೇಡ ಎನ್ನಲು ಆಗುವುದಿಲ್ಲ. ರಾಜಕೀಯದಲ್ಲಿರುವ ಕಾರಣ ನಮಗೆ ಸಾಧು ಸಂತರು, ಸ್ವಾಮೀಜಿಗಳು, ಹಿರಿಯರು ಸೇರಿದಂತೆ ಎಲ್ಲಾ ರೀತಿಯ ಜನರೂ ನಮಗೆ ಬೇಕು. ನಮ್ಮ ಸರ್ಕಾರ ಧಾರ್ಮಿಕ ದತ್ತಿ ಇಲಾಖೆ ನಡೆಸುತ್ತಿದೆ. ವಕ್ಫ್, ಚರ್ಚ್ ಸೇರಿದಂತೆ ಎಲ್ಲಾ ಧಾರ್ಮಿಕ ಕೇಂದ್ರಗಳಿಗೂ ಸಹಾಯ ಮಾಡಲಾಗುತ್ತಿದೆ ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಬಂಧನ ಭೀತಿಯಿಂದ ತಲೆ ಮರ್ಸ್ಕೊಂಡ್ರ ಬೈರತಿ ಬಸವರಾಜ್
Next: ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ ಲೈಟ್ ಫೌಂಡೇಶನ್ ಸಂಸ್ಥೆ ವತಿಯಿಂದ ಕ್ರಿಸ್ ಮಸ್ ಆಚರಣೆ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.