Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದೇಶಕ್ಕಾಗಿ ಆಸ್ತಿ, ಅಧಿಕಾರ, ಪ್ರಾಣ ತ್ಯಾಗ ಮಾಡಿದ್ದು ಗಾಂಧಿ ಕುಟುಂಬ: ಡಿಕೆಶಿ
  • Bangalore
  • Politics
  • State

ದೇಶಕ್ಕಾಗಿ ಆಸ್ತಿ, ಅಧಿಕಾರ, ಪ್ರಾಣ ತ್ಯಾಗ ಮಾಡಿದ್ದು ಗಾಂಧಿ ಕುಟುಂಬ: ಡಿಕೆಶಿ

Praja Vahini December 20, 2025 1 minute read
WhatsApp Image 2025-12-20 at 16.35.58
Spread the love

ಬೆಂಗಳೂರು: ದೇಶದ ಐಕ್ಯತೆ ಹಾಗೂ ಸ್ವಾತಂತ್ರ್ಯಕ್ಕೆ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧಿಜಿ ಅವರ ಹೆಸರನ್ನು ನಾಥೂರಾಮ್ ಗೋಡ್ಸೆ ಪಕ್ಷದವರು ತೆಗೆಯಲು ಮುಂದಾಗಿದ್ದಾರೆ. ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಕಾಂಗ್ರೆಸಿಗರು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಂದೇಶ ರವಾನಿಸಿದರು.

ಸ್ವಾತಂತ್ರ್ಯ ಉದ್ಯಾನದಲ್ಲಿ ಇದು (ಶನಿವಾರ ಡಿ. 20) ನಡೆದ ಸತ್ಯಮೇವ ಜಯತೆ ಪ್ರತಿಭಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ದೇಶದ ಸ್ವಾತಂತ್ರ್ಯದ ನಾಯಕತ್ವ ವಹಿಸಿದ ಮಹಾತ್ಮಾ ಗಾಂಧೀಜಿ ಅವರು ನೂರು ವರ್ಷಗಳ ಹಿಂದೆ ಕನ್ನಡ ನೆಲ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿದರು. ಈ ದೇಶಕ್ಕೆ ಸ್ವಾತಂತ್ರ್ಯದ ಬುನಾದಿ ಹಾಕಿದರು. ಕಳೆದ ವರ್ಷ ನಾವು ಗಾಂಧಿ ಭಾರತ ಕಾರ್ಯಕ್ರಮ ಮಾಡಿದೆವು. ಮಹತ್ಮಾ ಗಾಂಧೀಜಿ ಅವರ ಹೆಸರಿನಲ್ಲಿ ನಮ್ಮ ಸರ್ಕಾರ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಗೆ ತಂದಿತು.

ಈ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ಭೂಮಿ ಮಟ್ಟ ಮಾಡಲು, ಕೊಟ್ಟಿಗೆ ನಿರ್ಮಾಣ, ಆಶ್ರಯಮನೆ ನಿರ್ಮಾಣ ಮಾಡಲು ಸರ್ಕಾರ ಕೂಲಿ ನೀಡುತ್ತದೆ. ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ಮನಮೋಹನ್ ಸಿಂಗ್ ಅವರು ಈ ಐತಿಹಾಸಿಕ ತೀರ್ಮಾನ ಕೈಗೊಂಡಿದ್ದಾರೆ. ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿ ತಂದ ಈ ಯೋಜನೆಯಲ್ಲಿ ಈ ಸರ್ಕಾರ ಗಾಂಧೀಜಿ ಅವರ ಹೆಸರು ತೆಗೆಯುತ್ತಿದೆ. ಬಿಜೆಪಿಗೆ ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧಿ ಚಿತ್ರವನ್ನು ತೆಗೆಯಿರಿ ಎಂದು ಹೇಳಿದೆ. ಮಹಾತ್ಮಾ ಗಾಂಧಿ ಅವರ ಹೆಸರು ಅಜರಾಮರ ಎಂದು ತಿಳಿಸಿದರು.

ಬಿಜೆಪಿಗರು ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಬೇಡಿ

ಬಿಜೆಪಿಗರು ಗಾಂಧಿ ಪ್ರತಿಮೆ ಮುಂದೆ ನಿಂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಬಿಜೆಪಿ ನಾಯಕರು ಹಾಗೂ ಶಾಸಕರು ಇನ್ನು ಮುಂದೆ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಬಾರದು ಎಂದು ಸವಾಲು ಹಾಕುತ್ತೇನೆ. ಬಡವರಿಗೆ ಉದ್ಯೋಗ ನೀಡುವ ಯೋಜನೆಯ ಹೆಸರಿನಿಂದ ನೀವು ಗಾಂಧೀಜಿ ಅವರ ಹೆಸರು ತೆಗೆಯುತ್ತಿದ್ದೀರಿ ಎಂದರೆ ನೀವು ದೇಶದ್ರೋಹಿಗಳು. ಬೇರೆ ದೇಶದ ನಾಯಕರು ನಮ್ಮ ದೇಶಕ್ಕೆ ಬಂದರೆ ಮೊದಲು ಅವರು ಗಾಂಧಿ ಸಮಾಧಿಗೆ ಹೋಗಿ ಪೂಜೆ ಮಾಡುತ್ತಾರೆ. ಗಾಂಧಿ ಭಾವಚಿತ್ರಕ್ಕೆ ನಮಿಸುತ್ತಾರೆ. ಆದರೆ ಗಾಂಧಿ ಅವರ ಹೆಸರು ತೆಗೆಯುವ ಮೂಲಕ ಮತ್ತೊಮ್ಮೆ ಗಾಂಧಿ ಅವರನ್ನು ಕೊಲ್ಲುತ್ತಿದ್ದೀರಿ. ಇದನ್ನೂ ಓದಿ: ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಶರಣಪ್ರಕಾಶ್‌ ಪಾಟೀಲ್‌

ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ

ನ್ಯಾಷನಲ್ ಹೆರಾಲ್ಡ್ ದೇಶದ ಆಸ್ತಿ. ದ್ವೇಷ ಬಿಜೆಪಿ ಆಸ್ತಿ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ. ಇಂದು ಸತ್ಯಮೇವ ಜಯತೆ ಎಂದು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿಗೆ ಘನತೆ ಇಲ್ಲದೆ ಬದುಕುತ್ತಿದ್ದಾರೆ. ಪಿತೂರಿಯಿಂದ ಸೋಲಿಸಲು, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ದೇಶದ ಭವಿಷ್ಯ ರೂಪಿಸಲು ಸಂವಿಧಾನದ ರೂಪದಲ್ಲಿ ಕಾರ್ಯಕ್ರಮಗಳನ್ನು ಕೊಟ್ಟುಕೊಂಡು ಬಂದಿದೆ ಎಂದು ತಿಳಿಸಿದರು.

ಈ ದೇಶದ ಉಕ್ಕಿನ ಮಹಿಳೆ ಇಂದಿರಾ ಗಾಂಧಿ ಅವರು ಬ್ಯಾಂಕ್ ರಾಷ್ಟ್ರೀಕರಣ, ಉಳುವವನಿಗೆ ಭೂಮಿ, ಮನಮೋಹನ್ ಸಿಂಗ್ ಅವರು ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮೋಟಮ್ಮ ಅವರ ನೇತೃತ್ವದಲ್ಲಿ ಸ್ತ್ರೀಶಕ್ತಿ ಸಂಘ ಪ್ರಾರಂಭಿಸಿದರು. ನಮ್ಮ ಈ ಯೋಜನೆಗಳನ್ನು ಬೇರೆ ಸರ್ಕಾರಗಳು ತೆಗೆದುಹಾಕಲು ಸಾಧ್ಯವಾಯಿತಾ ಇಲ್ಲ. ನಮ್ಮ ಐದು ಗ್ಯಾರಂಟಿಗಳನ್ನೂ ಕೂಡ ತೆಗೆದುಹಾಕಲು ಸಾಧ್ಯವಿಲ್ಲ. ಇದು ಕಾಂಗ್ರೆಸ್ ಸರ್ಕಾರಗಳ ಕಾರ್ಯಕ್ರಮ. ಅಮಿತ್ ಶಾ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರು ಹೇಳುವುದನ್ನು ಟೀಕಿಸಿದ್ದರು. ಅದಕ್ಕೆ ನಾವು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಮಾಡಿದೆವು ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಬಡ-ಪ್ರತಿಭಾವಂತ ವಿದ್ಯಾರ್ಥಿಗಳ MBBS ಶಿಕ್ಷಣಕ್ಕೆ ಆರ್ಥಿಕ ನೆರವು
Next: ಮಣ್ಣಿನ ಆರೋಗ್ಯ, ನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂ ಚಾಲನೆ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.