Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಚಿವ ಜಮೀರ್ ಅಹ್ಮದ್ ಆಪ್ತನ ಮನೆ ಮೇಲೆ ಇಡಿ ರೈಡ್
  • Bangalore
  • Politics
  • State

ಸಚಿವ ಜಮೀರ್ ಅಹ್ಮದ್ ಆಪ್ತನ ಮನೆ ಮೇಲೆ ಇಡಿ ರೈಡ್

Praja Vahini December 24, 2025
WhatsApp Image 2025-12-24 at 12.49.30
Spread the love

ಬೆಂಗಳೂರು: ಇಂದು ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು 10 ಕಡೆ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು, ಇದರಲ್ಲಿ ಪ್ರಮುಖವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಹೌದು‌, ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಕಾರ್ಯದರ್ಶಿ ಸರ್ದಾರ್ ಸರಫ್ರಾಜ್ ಖಾನ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಹಲಸೂರು ನಿವಾಸದ ಬಳಿ ಒಟ್ಟು 10 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಸರ್ದಾರ್ ಸರಫ್ರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿದ್ದು, ಬೆಂಗಳೂರಿನಲ್ಲಿ ಸುಮಾರು ಏಳು ಕಡೆ ಇವರಿಗೆ ಸಂಬಂಧಿಸಿದ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಕೊಡಗಿನಲ್ಲಿ ಎರಡು ಕಾಪಿ ಎಸ್ಟೇಟ್ ಹೆಚ್ ಡಿ ಕೋಟೆಯಲ್ಲಿ ಒಂದು ರೆಸಾರ್ಟ್ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಭಕ್ಕೆ ಚಿಮ್ಮಿದ ಭಾರತದ ʼಬಾಹುಬಲಿʼ ರಾಕೆಟ್‌

ಸರ್ದಾರ್ ಸರ್ಫರಾಜ್ ಖಾನ್ ವಸತಿ ಇಲಾಖೆಗೆ ನಿಯೋಜನೆಗೊಂಡಿರುವ ಅಧಿಕಾರಿಯಾಗಿದ್ದು, ಅವರ ವಿರುದ್ಧ ಅಕ್ರಮ ಆಸ್ತಿ ಗಳಿಕೆಯ ಕುರಿತು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು (ಬುಧವಾರ ಡಿ. 24) ಬೆಳ್ಳಂಬೆಳಿಗ್ಗೆ 50ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ದಾಳಿಯನ್ನು ನಡೆಸಿದ್ದಾರೆ. ಎಲ್ಲಾ 10 ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ಮತ್ತು ಆಸ್ತಿ ವಿವರಗಳ ಸಂಗ್ರಹ ಕಾರ್ಯ ಮುಂದುವರೆದಿದೆ.

About the Author

Praja Vahini

Editor

View All Posts

Spread the love

Post navigation

Previous: ನಭಕ್ಕೆ ಚಿಮ್ಮಿದ ಭಾರತದ ʼಬಾಹುಬಲಿʼ ರಾಕೆಟ್‌
Next: ಡಾ.ಶಾಮನೂರು ಶಿವಶಂಕರಪ್ಪ ರವರಿಗೆ ನುಡಿ ನಮನ

Views:

36

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.