ಬೆಂಗಳೂರು: ಇತ್ತೀಚಿಗೆ ಸೋಶಿಯಲ್ ಮೀಡಿಯಾಗಳಲ್ಲಿ ಅಶ್ಲೀಲ ಕಾಮೆಂಟ್ಗಳು ಹಾಗೂ ಅಶ್ಲೀಲ ಪೋಸ್ಟ್ಗಳನ್ನು ಹಾಕಿ ಮಹಿಳೆಯರಿಗೆ ಕಿರುಕುಳ ನೀಡುತ್ತಿರುವುದು ಹೆಚ್ಚಾಗಿ ಬೆಳಕಿಗೆ ಕಂಡು ಬರುತ್ತಿದೆ.
ಅದರಲ್ಲೂ ಕೂಡ ಸ್ಟಾರ್ ನಟ-ನಟಿಯರಿಗೆ ಸೋಶಿಯಲ್ ಮೀಡಿಯಾಗಳಲ್ಲಿ ಅಶ್ಲೀಲ ಕಾಮೆಂಟ್ಸ್ ಗಳ ಹಾಕುವ ಮೂಲಕ ನಿಂದನೆ ಮಾಡುವುದು ಹೆಚ್ಚಾಗಿ ಕಂಡುಬರುತ್ತಿದೆ. ಅದಕ್ಕೆ ಉದಾಹರಣೆ ಎಂಬಂತೆ ಈಗಾಗಲೇ ಕನ್ನಡ ಚಿತ್ರರಂಗದ ನಟಿ ರಮ್ಯಾ ಅವರು ದೂರು ದಾಖಲಿಸಿದ್ದರು.
ಮತ್ತೆ ಇದೀಗ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿಯವರಿಗೆ ಇನ್ಸ್ಟಾಗ್ರಾಂ ನಲ್ಲಿ ನಿಂದನೆ ಮಾಡಿರುವ ಕುರಿತಾಗಿ ವಿಜಯಲಕ್ಷ್ಮಿಯವರು 15 ಇನ್ಸ್ಟಾಗ್ರಾಮ್ ಖಾತೆಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ವಿರುದ್ಧ ಕೆಟ್ಟ ಕಮೆಂಟ್ ಪೋಸ್ಟ್ ಮಾಡಿದ ಖಾತೆಗಳ ವಿರುದ್ದ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ: ಪ್ರತಿಕ್ರಿಯೆ ನೀಡದವರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳಬಾರದು! ಹೀಗಂದಿದ್ಯಾಕೆ ಕಿಚ್ಚ?
ನಿಂದನೆಯ ವಿರುದ್ಧ ಸಿಡಿದ ವಿಜಯಲಕ್ಷ್ಮಿ 15 ಇನ್ಸ್ಟಾಗ್ರಾಂ ಐಡಿ ಮತ್ತು 150ಕ್ಕೂ ಹೆಚ್ಚು ಕೆಟ್ಟ ಕಮೆಂಟ್ ವಿರುದ್ಧ ಫೋಟೋ ಸಮೇತ ದೂರು ನೀಡಿದ್ದಾರೆ.
