ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲಿ ಟೊಮೇಟೊ ಹಣ್ಣನ್ನು ಅಡುಗೆಗೆ ಬಳಸುತ್ತಾರೆ. ಟೊಮೆಟೊ ಕೇವಲ ಅಡುಗೆಗೆ ಮಾತ್ರವಲ್ಲದೆ ನಮ್ಮ ಆರೋಗ್ಯ ಸುಧಾರಿಸುವಲ್ಲಿ ಟೊಮೆಟೋ ಮಹತ್ವದ ಪಾತ್ರವನ್ನು ವಹಿಸುತ್ತದೆ. ಅಲ್ಲದೆ ಚರ್ಮದ ಕಾಂತಿಯನ್ನು ಹೆಚ್ಚಿಸಲು ಟೊಮೇಟೊ ಬಳಸಲಾಗುತ್ತದೆ.
ಟೊಮೆಟೊದಲ್ಲಿರುವ ಲಿಕೊಪೀನ್ ಎಂಬ ಶಕ್ತಿಶಾಲಿ ಆಂಟಿಆಕ್ಸಿಡೆಂಟ್ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ.
ಟೊಮೆಟೊವನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸಲಾಡ್ ಅಥವಾ ಜ್ಯೂಸ್ ರೂಪದಲ್ಲಿ ಸೇವಿಸುವುದು ಅತ್ಯಂತ ಲಾಭಕಾರಿ ಎಂದು ಅಧ್ಯಯನಗಳು ತಿಳಿಸಿವೆ. ನಿತ್ಯ ಟೊಮೆಟೊ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.
ಟೊಮೆಟೊ ಬೀಜಗಳಲ್ಲಿ ಕೊಲೆಸ್ಟ್ರಾಲ್ ಇರುವುದಿಲ್ಲ, ಬದಲಾಗಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುವ ನಾರು ಅಂಶ ಸಮೃದ್ಧವಾಗಿದೆ. ಇದಲ್ಲಿರುವ ಪೊಟ್ಯಾಶಿಯಂ ಹೃದಯ ಆರೋಗ್ಯವನ್ನು ಕಾಪಾಡಿ, ಹೃದಯ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಲಿಕೊಪೀನ್ ಮತ್ತು ಕ್ಲೋರೊಜೆನಿಕ್ ಆಸಿಡ್ ರಕ್ತದೊತ್ತಡವನ್ನು ನಿಯಂತ್ರಿಸುವಲ್ಲಿ ಸಹಾಯಕವಾಗಿದ್ದು, ಅಧಿಕ ರಕ್ತದೊತ್ತಡವನ್ನು ತಡೆಯಲು ನೆರವಾಗುತ್ತವೆ.
ಇದಲ್ಲದೆ, ರಕ್ತದ ಹೆಪ್ಪುಗಟ್ಟುವಿಕೆಯಿಂದ ಉಂಟಾಗುವ ಹೃದಯ ಕಾಯಿಲೆಗಳನ್ನು ತಡೆಯುವ ಗುಣವೂ ಟೊಮೆಟೊಗೆ ಇದೆ. ಇದು ಇಡೀ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸಿ, ಅತಿಸಾರ ಹಾಗೂ ಮಲಬದ್ಧತೆಯ ಸಮಸ್ಯೆಗಳನ್ನು ದೂರ ಮಾಡುತ್ತದೆ.
ಟೊಮೆಟೊ ಚರ್ಮದ ಆರೋಗ್ಯಕ್ಕೂ ಅತ್ಯುತ್ತಮವಾಗಿದೆ. ಸೇವಿಸಿದರೂ ಅಥವಾ ಚರ್ಮದ ಮೇಲೆ ಲೇಪಿಸಿದರೂ ಉತ್ತಮ ಫಲಿತಾಂಶ ನೀಡುತ್ತದೆ. ಚರ್ಮವನ್ನು ಉಜ್ಜಿ ಸ್ವಚ್ಛಗೊಳಿಸಲು ಸ್ಕ್ರಬ್ ಆಗಿ ಬಳಸಿದರೆ, ಮೃದುವಾದ ಹಾಗೂ ಕಾಂತಿಯುತ ಚರ್ಮವನ್ನು ಪಡೆಯಬಹುದು.
ಟೊಮೆಟೊಗಳಲ್ಲಿ ವಿಟಮಿನ್ ಎ ಮತ್ತು ಸಿ, ಲೈಕೋಪೀನ್ನಂತಹ ಉತ್ಕರ್ಷಣ ನಿರೋಧಕಗಳು ಮತ್ತು ಫೈಬರ್ಗಳು ಸಮೃದ್ಧವಾಗಿವೆ, ಇದು ಹೃದಯದ ಆರೋಗ್ಯವನ್ನು ಬೆಂಬಲಿಸುತ್ತದೆ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
