ಚಿತ್ರದುರ್ಗ: ಲಾರಿ ಒಂದು ಖಾಸಗಿ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ಗೆ ಬೆಂಕಿ ಹತ್ತಿ10ಕ್ಕೂ ಹೆಚ್ಚು ಜನ ಮರಣ ಹೊಂದಿರುವ ಘಟನೆ ಇಂದು (ಗುರುವಾರ ಡಿ. 25) ಬೆಳಗಿನ ಜಾವ 2:30ಕ್ಕೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ.
ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿದ್ದ ಲಾರಿ ಬೆಂಗಳೂರಿನಿಂದ ಶಿವಮೊಗ್ಗ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್ಸಿಗೆ ಗುದ್ದಿದೆ.
ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತುಕೊಂಡು 10ಕ್ಕೂ ಹೆಚ್ಚು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರೆ 9 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೇಂದ್ರದಿಂದ ಮ್ಯಾಚಿಂಗ್ ಗ್ರ್ಯಾಂಟ್ ಬಿಡುಗಡೆಗೆ ವಿಳಂಬ: ಅಜಯ್ ಸಿಂಗ್
ಗಾಯಾಳುಗಳು ಹಿರಿಯೂರು ಹಾಗೂ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
