ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಬಸ್ ನ ಘೋರ ದುರಂತ ನಡೆದಿದ್ದು, ಇರಲಿ ಹತ್ತಕ್ಕೂ ಹೆಚ್ಚು ಜನ ಸಜಿವ ದಹನ ಹೊಂದಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲ 5 ಲಕ್ಷ ಪರಿಹಾರ ಘೋಷಿಸುವುದರ ಜೊತೆಗೆ ಗಾಯಗೊಂಡಿರುವವರಿಗೂ ಕೂಡ ತಲಾ 50 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ. ಇದನ್ನೂ ಓದಿ: ಲಾರಿ ಖಾಸಗಿ ಬಸ್ ಡಿಕ್ಕಿ 10 ಜನ ಮರಣ
ಈ ಅಪಘಾತಕ್ಕೆ ಸಂಬಂಧಿಸಿದಂತೆ ಕಾರಣದ ಬಗ್ಗೆ ಸರಿಯಾದ ತನಿಖೆ ನಡೆಸಬೇಕು. ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.
