ದೆಹಲಿ: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಬಸ್ ಮತ್ತು ಲಾರಿ ಘೋರ ದುರಂತಕ್ಕೆ ಸಂಬಂಧಿಸಿದಂತೆ ರಾಜ್ಯ ಮಾತ್ರವಲ್ಲದೆ ರಾಷ್ಟ್ರ ನಾಯಕರು ಕೂಡ ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ದುರಂತದಲ್ಲಿ ಮರಣ ಹೊಂದಿದವರಿಗೆ ತಳ 5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ಪರಿಹಾರ ಗೋಷಿಸುವುದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಪ್ರಧಾನಮಂತ್ರಿಯ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ತಾತ್ಕಾಲಿಕ ಪರಿಹಾರ ಮತ್ತು ಗಾಯಗೊಂಡಿರುವ ರಿಗೆ 50 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬಸ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಸಿಎಂ
ಈಸಂಬಂಧ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಬರೆದುಕೊಂಡಿದ್ದಾರೆ.
