ಕಲಬುರಗಿ: ಜಯ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷರು ಹಾಗೂ ವಿಭಾಗೀಯ ಉಸ್ತುವಾರಿಗಳಾದ ಮಲ್ಲಿಕಾರ್ಜುನ ಎಸ್. ಸಾರವಾಡ ರವರ ನೇತೃತ್ವದಲ್ಲಿ, ಕಲಬುರಗಿ ನಗರದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ 2025-26ನೇ ಸಾಲಿನಲ್ಲಿ ಖಾಲಿ ಇರುವ ಕಾರ್ಯಕರ್ತೆ & ಸಹಾಯಕಿಯರ ನೇಮಕಾತಿಯಲ್ಲಿ (ನಿಯಮ ಬಾಹಿರವಾಗಿ) ಅಕ್ರಮವಾಗಿ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ನೇಮಕಾತಿ ಮಾಡಿಕೊಂಡು ಕರ್ತವ್ಯಲೋಪ ವೇಸಿಗಿರುವ ಸಿಡಿಪಿಒ ಇವರನ್ನು ಸೇವೆಯಿಂದ ಅಮಾನತ್ತು ಮಾಡಿ ಇಲಾಖೆ ವಿಚಾರಣೆ ನಡೆಸುವಂತೆ ಆಗ್ರಹಿಸಿ ಮಾನ್ಯ ನಿರ್ದೇಶಕರು, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ರವರಿಗೆ ಮನವಿ ಸಲ್ಲಿಸಲಾಯಿತು.
