ಬೆಂಗಳೂರು: ರಾಜ್ಯದಾದ್ಯಂತ ಇಂದು (ಮಂಗಳವಾರ ಡಿ. 30) ವೈಕುಂಠ ಏಕಾದಶಿಯ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಬೆಂಗಳೂರು ನಗರದಲ್ಲಿ ಹಲವು ವೆಂಕಟೇಶ್ವರ ದೇವಾಲಯದಲ್ಲಿ ಬೆಳಿಗ್ಗೆ ನಾಲ್ಕು ಗಂಟೆಯಿಂದಲೇ ವಿಶೇಷ ಪೂಜೆ ನೆರವೇರಿತು.
ಇನ್ನು ವೈಕುಂಠ ಏಕಾದಶಿಯ ಪ್ರಯುಕ್ತ ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿತು
ಅಲ್ಲದೇ ಅರಸೀಕೆರೆ ಮಲೇಕಲ್ಲು ಅಮರಗಿರಿ ತಿರುಪತಿ ದೇವಾಲಯ, ಮಾಲೂರಿನ ಚಿಕ್ಕತಿರುಪತಿ, ಮೈಸೂರು, ಬೆಳಗಾವಿ ಹುಬ್ಬಳ್ಳಿ ಚಿಕ್ಕಮಗಳೂರು, ಹಾಸನ, ಶೀರಂಗಪಟ್ಟಣದ ರಂಗನಾಥ ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ದೇಗುಲದಲ್ಲಿ ಪಂಚಾಭಿಷೇಕ, ಪುಷ್ಪಭಿಷೇಕ ಸೇರಿದಂತೆ ವಿವಿಧ ಪೋಜೆ ನಡೆಯುತ್ತಿದ್ದು, ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಇನ್ನು ಬೆಂಗಳೂರಿನ ಮಲ್ಲೇಶ್ವರಂ ಹಾಗು ಜೆಪಿ ನಗರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲುಮುಟ್ಟಿದೆ. ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಭಕ್ತರು ಆಗಮಿಸಿ ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ. ದೇಗುಲಕ್ಕೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯುತ್ತಿದ್ದು, ಇಂದು ದೇವಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದು, ನೂಕು ನುಗ್ಗಲಾಗದಂತೆ ದೇವಸ್ಥಾನದ ಸುತ್ತಲೂ ಬ್ಯಾರೀಕೇಟ್ ಅಳವಡಿಸಲಾಗಿದೆ. ಇದನ್ನೂ ಓದಿ: ದೆಹಲಿ ಒತ್ತಡಕ್ಕೆ ಮಣಿದ ಸಿಎಂ, ಡಿಸಿಎಂ: ಶೋಭಾ ಕರಂದ್ಲಾಜೆ
