Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ: ಡಿಕೆಶಿ
  • Bangalore
  • Politics
  • State

ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ: ಡಿಕೆಶಿ

Praja Vahini January 3, 2026 1 minute read
WhatsApp Image 2026-01-03 at 18.27.42
Spread the love

ಬೆಂಗಳೂರು: ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಯಾರು ಎಂಬುದು ತನಿಖೆಯಿಂದ ಹೊರಬರಲಿದ್ದು, ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು (ಶನಿವಾರ ಜ, 03) ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಬಾರಿಗೆ ಬಳ್ಳಾರಿಯಲ್ಲಿ ನಮ್ಮ ಸರ್ಕಾರ ವಾಲ್ಮೀಕಿ ಮಹರ್ಷಿಯವರ ಪುತ್ಥಳಿ ನಿರ್ಮಿಸುತ್ತಿದೆ. ನಮ್ಮ ಶಾಸಕರು ಅದರ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ನಗರದ ಎಲ್ಲೆಡೆ ಅದರ ಪೋಸ್ಟರ್ ಗಳನ್ನು ಹಾಕಿದ್ದಾರೆ. ಅದರಲ್ಲಿ ತಪ್ಪೇನಿದೆ? ನಮ್ಮ ಮನೆ ಮುಂದೆಯೂ ಬಿಜೆಪಿಯವರು ಪೋಸ್ಟರ್ ಹಾಕುತ್ತಿರುತ್ತಾರೆ. ಅದನ್ನು ನಾನು ಬೇಡ ಎನ್ನಲು ಸಾಧ್ಯವೇ? ಈ ಪೋಸ್ಟರ್ ಹಾಕುವುದರಿಂದ ಬಿಜೆಪಿಯವರಿಗೆ ಆಗಿರುವ ತೊಂದರೆ ಆದರೂ ಏನು? ಅವರು ಸರ್ಕಾರಿ ಜಾಗದಲ್ಲಿ ಹಾಕಿದ್ದಾರೆ? ಇದರಲ್ಲಿ ರೆಡ್ಡಿ ಜಗಳಕ್ಕೆ ಬರುವ ಅಗತ್ಯವೇನಿತ್ತು. ನಾವು ನಮ್ಮ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಇದಕ್ಕೆ ಕಾರಣ ಬಿಜೆಪಿಯವರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಬಗ್ಗೆ ಸಿಎಂ, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ಮಾತನಾಡಿದ್ದಾರೆ. ಪೊಲೀಸರ ತನಿಖೆಯಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ವಾಣಿಜ್ಯ ಸ್ವತ್ತುಗಳ ಕಂದಾಯ ಪರಿವೀಕ್ಷಣೆ ನಡೆಸಲು ಸೂಚನೆ : ಡಾ. ರಾಜೇಂದ್ರ ಕೆ.ವಿ.

ಪಕ್ಷದ ವತಿಯಿಂದ ಈ ಘಟನೆ ಬಗ್ಗೆ ಅಧ್ಯಯನ ನಡೆಸಲು ಹೆಚ್.ಎಂ. ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ನಿಯೋಗ ಕಳುಹಿಸಿದ್ದೇವೆ. ಬಿಜೆಪಿಯವರಿಗೆ ಬಳ್ಳಾರಿಯಲ್ಲಿ ನಮ್ಮ ಪಕ್ಷದ ಗೆಲುವು ಅರಗಿಸಿಕೊಳ್ಳಲು ಆಗುತ್ತಿಲ್ಲ. ಸೋತ ನಂತರ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಅವರು ತಬ್ಬಾಡುತ್ತಿದ್ದಾರೆ. ಅವರ ನಡುವೆ ಏನೇನೂ, ಎಷ್ಟಿದೆ ಎಂಬುದು ಗೊತ್ತಿದೆ. ಮತ್ತೆ ಬಳ್ಳಾರಿಯಲ್ಲಿ ತಮ್ಮ ರಿಪಬ್ಲಿಕ್ ತರಲು ಪ್ರಯತ್ನಿಸುತ್ತಿದ್ದಾರೆ. ನಾವು ಅದಕ್ಕೆ ಅವಕಾಶ ನೀಡುವುದಿಲ್ಲ. ನಮ್ಮ ಕಾರ್ಯಕರ್ತರಿಗೆ ನಮ್ಮ ಸಿಎಂ ಈಗಾಗಲೇ ನಿರ್ದೇಶನ ನೀಡಿದ್ದಾರೆ. ಜನಾರ್ದನ ರೆಡ್ಡಿ ಅವರು ಅಲ್ಲಿಗೆ ಬರುವವರೆಗೂ ಅಲ್ಲಿ ಒಂದೇ ಒಂದು ಗಲಾಟೆ ನಡೆದಿರಲಿಲ್ಲ ಎಂದು ಹೇಳಿದರು.

ಈ ಪ್ರಕರಣದ ಬೆನ್ನಲ್ಲೇ ಎಲ್ಲಾ ಖಾಸಗಿ ಗನ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಗನ್ ವಿತರಣೆ ವಿಚಾರದಲ್ಲಿ ಕೈಗೊಳ್ಳಬೇಕಾಗಿರುವ ಕ್ರಮಗಳನ್ನು ಸಿದ್ಧಪಡಿಸಿ, ನಿಯಮಾವಳಿ ರೂಪಿಸುತ್ತೇವೆ ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ವಾಣಿಜ್ಯ ಸ್ವತ್ತುಗಳ ಕಂದಾಯ ಪರಿವೀಕ್ಷಣೆ ನಡೆಸಲು ಸೂಚನೆ : ಡಾ. ರಾಜೇಂದ್ರ ಕೆ.ವಿ.
Next: ಉತ್ತಮ ಶಿಕ್ಷಕಿಗೆ ಒಲಿದ ‘ಸಾವಿತ್ರಿಬಾಯಿ ಪುಲೆ’ ಪ್ರಶಸ್ತಿ ಕಿರೀಟ

Views:

38

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.