Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ- ಸಮುದಾಯಕ್ಕೆ ಸಿಎಂ ಕರೆ
  • Bangalore
  • Front news
  • Politics
  • State

ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ- ಸಮುದಾಯಕ್ಕೆ ಸಿಎಂ ಕರೆ

Praja Vahini January 4, 2026 1 minute read
7e9d3d31-e3c2-4677-ab1f-75e13e3636cf
Spread the love

ಬೆಂಗಳೂರು: ಹಿಂದುಳಿದವರು ಸಂಘಟಿಸಿದರೆ ಜಾತೀಯತೆಯಾಗುವುದಿಲ್ಲ. ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ ಎಂದು ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಅವರು ಇಂದು ದೇವಾಂಗ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ದೇವಾಂಗ ಸಂಘದ ಶತಮಾನೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು
ದೇವಾಂಗ ಸಮುದಾಯದವರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸಂಘವು ನೂರು ವರ್ಷಗಳನ್ನು ಪೂರೈಸುವುದು ಮೈಲಿಗಲ್ಲು ಸಾಧನೆಯಾಗಿದೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ನಿಲಯ, ವ್ಯವಸ್ಥೆ ಒದಗಿಸಲಾಗುತ್ತಿರುವುದು ಸಂತಸದ ವಿಚಾರ ಎಂದರು.

ಮಹಿಳಾ ವಸತಿನಿಲಯ ನಿರ್ಮಾಣಕ್ಕೆ ಸರ್ಕಾರದ ನೆರವಿಗೆ ಭರವಸೆ
ಮಹಿಳೆಯರು ಹಾಗೂ ಶೋಷಿತರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದರು. ಪ್ರಸ್ತುತ ಲಿಂಗ ತಾರತಮ್ಯ ನೀಗುತ್ತಿದ್ದು, ಸಂಘದವರು ಮಹಿಳಾ ಸಬಲೀಕರಣಕ್ಕೆ ನೆರವು ನೀಡುತ್ತಿದೆ. ಮಹಿಳಾ ವಸತಿನಿಲಯ ನಿರ್ಮಾಣಕ್ಕೆ ಸರ್ಕಾರದಿಂದ ಸಹಾಯ ನೀಡುವ ಭರವಸೆ ನೀಡಿದರು.

ಸಮುದಾಯದ ಸಂಘಟನೆ ಅಗತ್ಯ
ಎಲ್ಲರನ್ನೊಳಗೊಂಡ ಅಭಿವೃದ್ಧಿಯನ್ನು ಸಾಧಿಸುವುದು ನಮ್ಮ ಸರ್ಕಾರದ ಧ್ಯೇಯ. ಶ್ರೀಮಂತ ಇತಿಹಾಸವಿರುವ ಈ ಸಮುದಾಯದವರು ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿದೆ. ರೈತರು ಆಹಾರ ಪೂರೈಸಿದಂತೆ, ನೇಕಾರರು ಬಟ್ಟೆಯನ್ನು ತಯಾರಿಸುತ್ತಾರೆ. ಈ ಸಮುದಾಯದ ಸಂಘಟನೆಯಾಗುವುದು ಅಗತ್ಯ. ಸಂಘಟನೆಯ ಮೂಲಕವೇ ಶಕ್ತಿ ಬೆಳೆಯುತ್ತದೆ. ಹಿಂದುಳಿದವರು ಸಂಘಟಿಸಿದರೆ ಜಾತಿಯತೆಯಾಗುವುದಿಲ್ಲ ಎಂದು ಸಮಾಜ ಚಿಂತಕರು ಲೋಹಿಯಾ ಅವರು ಹೇಳಿದ್ದಾರೆ. ಶಿಕ್ಷಣದಿಂದ ವಂಚಿತರಾಗಿರುವುದರಿಂದ ಸಮಾಜದಲ್ಲಿ ಅಸಮಾನತೆಯಿದೆ. ಬಸವಾದಿ ಶರಣರು ಸಮಾಜದಲ್ಲಿ ಜಾತಿ ವ್ಯವಸ್ಥೆಯ ವಿರುದ್ಧ ಧ್ವನಿ ಎತ್ತಿದ್ದರು.ಡಾ.ಬಿ.ಆರ್.ಅಂಬೇಡ್ಕರ್ ಅವರು, ಪ್ರತಿಯೊಬ್ಬರಿಗೂ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ,ರಾಜಕೀಯ ಸ್ವಾತಂತ್ರ್ಯದಿಂದ ಮಾತ್ರ ಸಮಸಮಾಜ ನಿರ್ಮಾಣವಾಗುತ್ತದೆ ಎಂದು ನುಡಿದಿದ್ದರು.

*ಉಪಜಾತಿಗಳಲ್ಲಿ ವಿಭಜಿಸದೇ ಒಂದೇ ಶಕ್ತಿಯಾಗಿ ಸಂಘಟಿತರಾಗಿ- ಸಮುದಾಯಕ್ಕೆ ಸಿಎಂ ಕರೆ*
ದೇವಾಂಗ ಸಮುದಾಯದಲ್ಲಿರುವ ಎಲ್ಲ ಉಪಜಾತಿಗಳನ್ನು ತೆಗೆಯಬೇಕು. ಸಮುದಾಯದಲ್ಲಿ ಹಲವು ಗುಂಪುಗಳಿದ್ದರೂ, ಒಂದೇ ಶಕ್ತಿಯಾಗಿ ಸಂಘಟಿತರಾಗಿ , ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು. ಸಮಾಜದಲ್ಲಿ ಸಾಕ್ಷರತೆ ಶೇ.76 ರಷ್ಟಿದ್ದು, ಮಹಿಳೆಯರಲ್ಲಿ ಈ ಪ್ರಮಾಣ ಗಣನೀಯವಾಗಿ ಕಡಿಮೆಯಿದೆ. ಸಮುದಾಯದ ಪ್ರತಿಯೊಬ್ಬರೂ ಶಿಕ್ಷಿತರಾಗಬೇಕು. ಜಾತಿವ್ಯವಸ್ಥೆಯಿಲ್ಲದ ಸಮಾಜವನ್ನು ನಿರ್ಮಿಸುವುದೇ ಸಂವಿಧಾನದ ಆಶಯವಾಗಿದೆ. ಎಲ್ಲ ಜಾತಿಧರ್ಮದವರು ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ರೂಢಿಸಿಕೊಳ್ಳಬೇಕು. ಶಿಕ್ಷಣ ಸಂಘಟನೆ ಮತ್ತು ಹೋರಾಟದ ಮೂಲಕ ನಿಮ್ಮ ಹಕ್ಕುಗಳನ್ನು ಪಡೆಯಿರಿ ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
Next: ಎಚ್.ಎಂ.ರೇವಣ್ಣ ಅವರು ಉತ್ತಮ ಮಾಹಿತಿ ಸಂಗ್ರಹಿಸಿ ತಂದಿದ್ದಾರೆ: ಡಿಸಿಎಂ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.