Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ: ಸಿಎಂ
  • Politics
  • State
  • ಮೈಸೂರು

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ: ಸಿಎಂ

Praja Vahini January 5, 2026 1 minute read
WhatsApp Image 2026-01-05 at 20.44.58
Spread the love

ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.

ಮೈಸೂರಿನ ಇಂದು (ಸೋಮವಾರ ಜ. 05) ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಮುಖ್ಯಮಂತ್ರಿಯ ಸುದೀರ್ಘ ಅವಧಿಯ ದಾಖಲೆಯನ್ನು ಮುರಿಯಲು ಜನರ ಆಶೀರ್ವಾದದಿಂದ ಇದು ಸಾಧ್ಯವಾಗಿದೆ. ಅರಸು ರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ.  13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ ಎಂದರು. ಇದನ್ನೂ ಓದಿ: ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು: ಬಿವೈವಿ

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ.

ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ.   ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಚುನಾವಣೆಯನ್ನು  ಸರ್ವಾನುಮತದಿಂದಲೂ ಆಯ್ಕೆಯಾಗಿದ್ದರು.  ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು. ಸಾಧನಾ ಸಮಾವೇಶ ಆಯೋಜಿಸುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದರು.

ಸಂಪುಟ ಪುನರ್ರಚನೆ- ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚಿಸಿ ನಿರ್ಧಾರ

ಬಜೆಟ್ ತಯಾರಿಯನ್ನು ಸಂಕ್ರಾಂತಿಯ ನಂತರ ಪ್ರಾರಂಭಿಸಲಾಗುವುದು. ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸಲಾಗುವುದು. ಅವರು ಸಮಯ ನೀಡಿದರೆ ಚರ್ಚಿಸಲಿರುವುದಾಗಿ ತಿಳಿಸಿದರು.

ಬಳ್ಳಾರಿ ಘಟನೆ-ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಲಿದೆ

ಬಳ್ಳಾರಿ ನಡೆದ ಸಂರ್ಘಷದಲ್ಲಿ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿರುವ ಘಟನೆಯ ತನಿಖೆಯನ್ನು ಸಿಐಡಿ ಗೆ ವಹಿಸಲಾಗುವುದೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಗೃಹ ಸಚಿವರೊಂದಿಗೆ ಚರ್ಚಿಸುತ್ತೇನೆ. ಪೊಲೀಸ್ ತನಿಖೆಯ ನಂತರ ಘಟನೆಯ ಸತ್ಯಾಸತ್ಯತೆ ತಿಳಿಯಲಿದೆ ಎಂದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅನ್ಯಾಯ

ಜಿಎಸ್ ಟಿ ಕಡಿತ, ವಿಬಿ ಜಿ ರಾಮ್ ಜಿ ಯೋಜನೆ ಜಾರಿಯಂತಹ ಕೇಂದ್ರದ ಕ್ರಮಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ, ರಾಜ್ಯಕ್ಕೆ ಜಿಎಸ್ ಟಿ ಯಿಂದ  ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮ ನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸನ್ಣರೈತರು,ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳನ್ನು ಕಡಿಮೆಯಾಗಲಿದ್ದು, ಜನರ ಮೂಲಭೂತ ಹಕ್ಕಿಗಳನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ. ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯಸರ್ಕಾರದ ಮೇಲೆ ಸುಮಾರು 3000 ಕೋಟಿ ರೂ.ಗಳ ಹೊರೆ ಬೀಳಲಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಕರ್ನಾಟಕವನ್ನು ಬಾಂಗ್ಲಾದೇಶ ಮಾಡಲು ಕಾಂಗ್ರೆಸ್ ಕುಮ್ಮಕ್ಕು: ಬಿವೈವಿ
Next: ಶಿಕ್ಷಣವಿಲ್ಲದಿದ್ದರೆ  ಸ್ವಾಭಿಮಾನಿಗಳಾಗಿ ಬದುಕಲು ಸಾಧ್ಯವಿಲ್ಲ: ಸಿಎಂ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.