Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಾಖಲೆಯ ಸರದಾರನಾದ ಸಿಎಂ ಸಿದ್ದು
  • Bangalore
  • Politics
  • State

ದಾಖಲೆಯ ಸರದಾರನಾದ ಸಿಎಂ ಸಿದ್ದು

Praja Vahini January 6, 2026 1 minute read
WhatsApp Image 2026-01-06 at 15.32.05 (1)
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲೇ ಸುಧೀರ್ಘ ಅವಧಿಯ ಸಿಎಂ ಎಂಬ ಹೆಗ್ಗಳಿಕೆ ಹೊಂದಿದ್ದ ಮಾಜಿ ಸಿಎಂ ಡಿ ದೇವರಾಜ ಅರಸು ಅವರ ಹೆಗ್ಗಳಿಕೆಯನ್ನ ಸಿದ್ದರಾಮಯ್ಯ ಸರಿಗಟ್ಟಿದ್ದಾರೆ. ರಾಜ್ಯದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಅಹಿಂದ ನಾಯಕ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಸುದೀರ್ಘ ಸಿಎಂ ಹೆಗ್ಗಳಿಗೆ ಮಾತ್ರವಲ್ಲದೇ ಬಜೆಟ್ ಮಂಡನೆಯಲ್ಲೂ ಸಿದ್ದರಾಮಯ್ಯ ಈಗಾಲೇ ಎಲ್ಲರಿಗಿಂತ ಮುಂದಿದ್ದಾರೆ.

ಯೆಸ್‌… ರಾಜ್ಯದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅವರು ಪಾತ್ರರಾಗಿದ್ದು, ದೇವರಾಜ ಅರಸು ದಾಖಲೆಯನ್ನ ಮುರಿದಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಸಿಎಂ‌ ಆಗಿದ್ದ‌ರು. 1972ರ ಮಾರ್ಚ್‌ 22 ರಿಂದ 1977ರ ಡಿಸೆಂಬರ್‌ 31ರವರೆಗೆ ಐದು ವರ್ಷಗಳ ಕಾಲ ಪೂರ್ಣಾವಧಿಯ ಮುಖ್ಯಮಂತ್ರಿ ಆಡಳಿತ ನಡೆಸಿದ್ದರು. ಎರಡನೇ ಬಾರಿಗೆ 1978ರ ಫೆಬ್ರವರಿ 28ರಿಂದ 1980ರ ಜನವರಿ 7ರವರೆಗೆ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದರು. ಒಟ್ಟು ಏಳು ವರ್ಷ ಏಳು ತಿಂಗಳ ಕಾಲಾವಧಿಯಲ್ಲಿ 2,792 ದಿನಗಳ ಕಾಲ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು.

ಇದೀಗ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 2013ರ ಮೇ ತಿಂಗಳಿನಿಂದ 2018ರ ಮೇವರೆಗೆ ಐದು ವರ್ಷ ಪೂರ್ಣಾವಧಿ ಮುಖ್ಯಮಂತ್ರಿಯಾಗಿದ್ದು, 40 ವರ್ಷಗಳ ಬಳಿಕ ಕರ್ನಾಟಕ ರಾಜಕಾರಣದಲ್ಲಿ ದೇವರಾಜ್‌ ಅರಸು ಅವರನ್ನು ಹೊರತುಪಡಿಸಿ ಸಿದ್ದರಾಮಯ್ಯ ಅವಧಿ ಪೂರ್ಣಗೊಳಿಸಿದ ಮುಖ್ಯಮಂತ್ರಿ ಎಂಬ ಕೀರ್ತಿಗೆ ಪಾತ್ರವಾಗಿದ್ದರು. ಬಳಿಕ 2023 ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆದು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ಧಾರೆ. ಇಂದಿಗೆ ಸಿದ್ದರಾಮಯ್ಯ 2,792 ದಿನಗಳ ಅವಧಿ ಪೂರ್ಣಗೊಳಿ ಅರಸು ದಾಖಲೆಯನ್ನ ಪುಡಿಗಟ್ಟಲಿದ್ದಾರೆ.

ಹೌದು.. ಸಿದ್ದರಾಮಯ್ಯ ಈ ಮಟ್ಟಕ್ಕೆ ಬೆಳೆಯಲು ನಡೆದುಬಂದ ಹಾದಿಯೇನು ಅಷ್ಟು ಸುಗಮವಾಗಿರಲಿಲ್ಲ. ಹತ್ತು ಹಲವು ಅವಮಾನಗಲು ಪಕ್ಷದಿಂದ ಉಚ್ಛಾಟನೆ ಹೀಗೆ ಹಲು ಮೆಟ್ಟಿಲುಗಳನ್ನ ಸಿಎಂ ಗಾದಿಗೇರಿದವರು. ಅರಸು ಅವರು ಸಿದ್ಧಾಂತವನ್ನ ಆಧುನಿಕ ರಾಜಕಾರಣದಲ್ಲಿ ಮರುಸ್ಥಾಪಿಸಿ, ಅಹಿಂದ ವರ್ಗಗಳ ಪ್ರಶ್ನಾತೀತ ನಾಯಕರಾಗಿ ಹೊರಹೊಮ್ಮಿದ್ದು ಮಾತ್ರ ಇಂದಿಗೂ ಚರಿತ್ರೆ.

ಮೈಸೂರಿನ ತಾಲೂಕು ಬೋರ್ಡ್ ಸದಸ್ಯರಾಗಿ ಎರಡು ಬಾರಿ ಉಪಮುಖ್ಯಮಂತ್ರಿ, ಹಣಕಾಸು ಸಚಿವ, ವಿರೋಧ ಪಕ್ಷದ ನಾಯಕ, ಶಾಸಕಾಂಗ ಪಕ್ಷದ ನಾಯಕರೂ ಆಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನೇರ ನಡೆ ಹಾಗೂ ನುಡಿಗಳ ಮೂಲಕ ಗುರುತಿಸಿಕೊಂಡಿದ್ದು, ತಾಲ್ಲೂಕು ಬೋರ್ಡ್‌ನಿಂದ ಸಿಎಂ ಹುದ್ದೆವರೆಗೂ ರಾಜ್ಯ ರಾಜಕೀಯದಲ್ಲಿ ತಮ್ಮದೇಯಾದ ವರ್ಚಸ್ಸು ಹೊಂದಿರುವ ನಾಯಕರಾಗಿದ್ದಾರೆ. ಇದನ್ನೂ ಓದಿ: ಜನಾರ್ಧನ ರೆಡ್ಡಿ ತಮ್ಮ ಇತಿಹಾಸದ ಪುಸ್ತಕ ತೆರೆದು ಕ್ರಿಮಿನಲ್ ಯಾರು ಎಂಬುದನ್ನು ನೋಡಿಕೊಳ್ಳಲಿ: ಡಿಕೆಶಿ

ಇಂದು ಸಿಎಂ ಆಗಿ ದಾಖಲೆ ಬರೆದಿರುವ ಸಿದ್ದರಾಮಯ್ಯ 1978 ರಲ್ಲಿ ಮೈಸೂರಿನ ತಾಲೂಕು ಬೋರ್ಡ್ ಚುನಾವಣೆ ಮೂಲಕ ರಾಜಕಾರಣಕ್ಕೆ ಪಾದಾರ್ಪಣೆ ಮಾಡಿದ್ರು. ಬಳಿಕ 1983ರ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಲೋಕದಳದಿಂದ ಸ್ಪರ್ಧೆ ಮಾಡಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದರು. ಭಾರತೀಯ ಲೋಕದಳದಿಂದ ಜನತಾ ಪಕ್ಷಕ್ಕೆ ಸೇರಿದಾಗ, ಇವರನ್ನು ಹೊಸದಾಗಿ ರಚಿಸಿದ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು. ಬಳಿಕ 1985ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿ ಎರಡನೇ ಬಾರಿಗೆ ಶಾಸಕರಾದರು. ಆ ಬಳಿಕ ಪಶುಸಂಗೋಪನೆ ಸಚಿವರನ್ನಾಗಿ ನೇಮಕ ಮಾಡಲಾಯಿತು. ಸಂಪುಟ ಪುನಾರಚನೆಯ ಬಳಿಕ ಸಿದ್ದರಾಮಯ್ಯ ಅವರು ರೇಷ್ಮೆ ಮತ್ತು ಸಾರಿಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು.

ಬಳಿಕ 1989 ರಲ್ಲಿ ಸಿದ್ಧರಾಮಯ್ಯ ಅವರು ಜಾತ್ಯಾತೀತ ಜನತಾದಳ ಸೇರಿದರು. ಜನತಾದಳದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದರು. ನಂತರ 1994ರ ವಿಧಾನಸಭಾ ಚುನಾವನಣೆಯಲ್ಲಿ ಗೆದ್ದು ದೇವೇಗೌಡರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾದರು. 1996 -1999ವರೆಗೆ ಮೊದಲ ಬಾರಿ ಜಾತ್ಯಾತೀತ ಜನತಾ ದಳದಿಂದ ಹಾಗೂ 2004-2005 ರಲ್ಲಿ ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚನೆಯಾದಾಗ ಎರಡು ಬಾರಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಇನ್ನು 2013 ಅಹಿಂದ ಸಂಘಟನೆ ಸ್ಥಾಪನೆಯ ಹಿನ್ನೆಲೆಯಲ್ಲಿ ದೇವೇಗೌಡರೊಂದಿಗಿನ ಮನಸ್ಥಾಪದಿಂದ ಜೆಡಿಎಸ್‌ ತೊರೆದು ಕಾಂಗ್ರೆಸ್ ಪಕ್ಷವನ್ನು ಸೇರಿಸಿದರು. 2013 ರಲ್ಲಿ ಮುಖ್ಯಮಂತ್ರಿ ಆಗಿ ಆಯ್ಕೆಯಾದರು. 2018 ರ ವಿಧಾನಸಭೆಯ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದಾಗ ಕಾಂಗ್ರೆಸ್ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. ಬಳಿಕ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸಿದ್ದಾರೆ.

ಒಟ್ಟಾರೆ, ಸಿದ್ದರಾಮಯ್ಯ ಅವರು ಕರ್ನಾಟಕ ರಾಜಕಾರಣದಲ್ಲಿ ದಶಕಗಳಿಂದ ಇದ್ದ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಗಳ ಪ್ರಾಬಲ್ಯ ಮುರಿದು ಹಿಂದುಳಿದ ವರ್ಗಗಳ ಒಕ್ಕೂಟದ ಮೂಲಕ ಅಧಿಕಾರ ಹಿಡಿದ ಸಾಧಕ ಅಂದ್ರೆ ತಪ್ಪಾಗ್ಲಿಕ್ಕಿಲ್ಲ .

About the Author

Praja Vahini

Editor

View All Posts

Spread the love

Post navigation

Previous: ಜನಾರ್ಧನ ರೆಡ್ಡಿ ತಮ್ಮ ಇತಿಹಾಸದ ಪುಸ್ತಕ ತೆರೆದು ಕ್ರಿಮಿನಲ್ ಯಾರು ಎಂಬುದನ್ನು ನೋಡಿಕೊಳ್ಳಲಿ: ಡಿಕೆಶಿ
Next: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ

Views:

22

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.