Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ
  • Politics
  • State
  • ಮೈಸೂರು

ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿಎಂ

Praja Vahini January 6, 2026
WhatsApp Image 2026-01-06 at 11.46.52
Spread the love

ಮೈಸೂರು: ಸಮಾಜದಲ್ಲಿ ಅಸಮಾನತೆ ಇನ್ನೂ ಜೀವಂತವಾಗಿದ್ದು, ಅಸಮಾನತೆ ಹೋಗುವವರೆಗೂ, ಎಲ್ಲರಿಗೂ ನ್ಯಾಯ ಸಿಗುವವರೆಗೂ ಹೋರಾಟ ಹಾಗೂ ಜನರ ಕೆಲಸ ಮಾಡುತ್ತಲೇ ಇರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ತಮ್ಮ ನಿವಾಸದಲ್ಲಿ ಇಂದು (ಮಂಗಳವಾರ ಜ. 06) ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ಈ ದಾಖಲೆ ಕಾಕತಾಳೀಯವಾಗಿ ಆಗಿದೆ. ದೇವರಾಜ ಅರಸು ಅವರು ಎಷ್ಟು ವರ್ಷ ಆಡಳಿತ ಮಾಡಿದ್ದಾರೆಂದು ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯಲು ಸಾಧ್ಯವಾಗಿದೆ ಎಂದರು.

ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ಕುರಿತು ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ ಎಂದರು. ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದರು.

ಅಭಿಮಾನಿಗಳು ನಾಟಿ ಕೋಳಿ ಪಲಾವ್ ಹಂಚಿರುವುದು ನನಗೆ ತಿಳಿದಿಲ್ಲ ಎಂದ ಮುಖ್ಯಮಂತ್ರಿಗಳು ಹೇಳಿದರು. ಸಾಮಾನ್ಯವಾಗಿ ಹಳ್ಳಿಗಳಲ್ಲಿ ನೆಂಟರು ಬಂದಾಗ ಮಾತ್ರ ನಾಟಿ ಕೋಳಿ ಅಡುಗೆ ಮಾಡುತ್ತಾರೆ. ನಾನೂ ಹಳ್ಳಿಯವನಾಗಿರುವುದರಿಂದ ಸಹಜವಾಗಿ ನಾಟಿ ಕೋಳಿ, ರಾಗಿ ರಾಗಿ ಮುದ್ದೆ ತಿನ್ನುತ್ತಿದ್ದೆ. ಹಳ್ಳಿಯವರ ಊಟದ ಕ್ರಮ ಇದಾಗಿದ್ದು, ನಾನು ಮುಖ್ಯಮಂತ್ರಿಯಾಗಿರುವುದರಿಂದ ಸ್ವಲ್ಪ ಪ್ರಚಾರ ಸಿಗುತ್ತಿದೆ ಎಂದರು.

ರಾಜಕಾರಣ ತೃಪ್ತಿ ತಂದಿದೆ

ಇಷ್ಟು ವರ್ಷಗಳ ರಾಜಕಾರಣ ತೃಪ್ತಿ ತಂದಿದೆ ಎಂದ ಮುಖ್ಯಮಂತ್ರಿಗಳು ಜನರ ಕೆಲಸ ಮಾಡುವುದು ಖುಷಿಯ ಸಂಗತಿ ಎಂದರು. ರಾಜಕಾರಣ ಎಂದರೆ ಬಡವರು, ದಲಿತರು, ಹಿಂದುಳಿದವರ ಕೆಲಸ ಕೆಲಸ ಮಾಡಿಕೊಡುವುದು.
ಹೆಚ್ಚೆಂದರೆ ಶಾಸಕನಾಗಬೇಕೆಂದು ಅಂದುಕೊಂಡಿದ್ದೆ. ಶಾಸಕನಾದೆ, ಮಂತ್ರಿ, ಉಪಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಹಾಗೂ ಮುಖ್ಯಮಂತ್ರಿಯೂ ಆದೆ. ಅವಕಾಶಗಳು ಸಿಕ್ಕಿದ್ದರಿಂದ ಇವೆಲ್ಲ ಆಗಲು ಸಾಧ್ಯವಾಯಿತು ಎಂದರು. ಇದನ್ನೂ ಓದಿ: ದಾಖಲೆಯ ಸರದಾರನಾದ ಸಿಎಂ ಸಿದ್ದು

ದೇವರಾಜ ಅರಸು ಹಾಗೂ ನಾನು ಇಬ್ಬರೂ ಮೈಸೂರಿನವರೇ ಆಗಿದ್ದು, ಇಬ್ಬರೂ ದೀರ್ಘಾವಧಿಯ ಮುಖ್ಯಮಂತ್ರಿಗಳಾಗಿದ್ದು ಕಾಲಘಟ್ಟ ಬೇರೆ ಬೇರೆ. 1972ರಿಂದ 80ವರೆಗೆ ಮುಖ್ಯಮಂತ್ರಿಯಾಗಿದ್ದರು. ನಾನು ಎರಡು ಅವಧಿಗೆ ಆಗಿದ್ದೇನೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ದಾಖಲೆಯ ಸರದಾರನಾದ ಸಿಎಂ ಸಿದ್ದು
Next: ಕೇವಲ ಭರವಸೆ ಬೇಡ, ಜೆಜೆಎಂ ಬಾಕಿ ಬಿಲ್ ಪಾವತಿಸಿ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.