ಬೆಂಗಳೂರು: ಪತ್ರಕರ್ತರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಕೆ.ಶಿವಕುಮಾರ್ ಅಭಿನಂದನಾ ಸಮಿತಿ ಮತ್ತು ದಲಿತ ಸಂಘಟನೆಗಳ ಒಕ್ಕೂಟ ಜಂಟಿಯಾಗಿ ಆಯೋಜಿಸಿದ್ದ ಡಾ.ಕೆ.ಶಿವಕುಮಾರ್ ಅಭಿನಂದನಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿ, ಶಿವಕುಮಾರ್ ಅವರನ್ನು ಅಭಿನಂದಿಸಿ ಸನ್ಮಾನಿಸಿ ಅಭಿನಂದನಾ ನುಡಿಗಳನ್ನು ಆಡಿದರು.
ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್ ಮತ್ತು ಮೈಸೂರು, ಚಾಮರಾಜನಗರ ಜಿಲ್ಲೆಯ ಶಾಸಕರುಗಳ, ಮುಖಂಡರುಗಳು ಹಾಗೂ ದಲಿತ ಸಂಘಟನೆಗಳ ಮುಖಂಡರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
