Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ
  • Politics
  • State
  • ಹಾವೇರಿ

ಹಾವೇರಿ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸಿಎಂ

Praja Vahini January 7, 2026 1 minute read
WhatsApp Image 2026-01-07 at 21.29.30
Spread the love

ಹಾವೇರಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಅವರು ಇಂದು ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಹಾವೇರಿ ವೈದ್ಯಕೀಯ ವಿಜ್ಞಾನ ಗಳ ಸಂಸ್ಥೆಯ ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ವನ್ನು ನೆರವೇರಿಸಿ ಮಾತನಾಡಿದರು.

ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಘೋಷಿಸಿದ್ದ ಹಾವೇರಿ ವೈದ್ಯಕೀಯ ವಿಜ್ಞಾನ ಗಳ ಸಂಸ್ಥೆಯನ್ನು ಘೋಷಿಸಿದ್ದೆ. ಉಪಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಘೋಷಣೆ ಮಾಡಿದ್ದೆ ಎಂದು ಸ್ಮರಿಸಿದರು. ಇದನ್ನೂ ಓದಿ: ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿಎಂ

ಕರ್ನಾಟಕದಲ್ಲಿ ಇಂದು ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ವಿಜಯಪುರ ಜಿಲ್ಲೆ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

ಸ್ಥಳೀಯವಾಗಿ ಆರೋಗ್ಯ ಸೇವೆಗಳು ದೊರಕಬೇಕು

ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಾಗಿದ್ದು, ಬಡವರೆಲ್ಲರೂ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬಹಳ ದುಬಾರಿ. ದುಬಾರಿ ಚಿಕಿತ್ಸೆಯನ್ನು ಸಾಮಾನ್ಯ ಜನರು ಧರಿಸುವುದು ಕಷ್ಟ. ಸ್ಥಳೀಯವಾಗಿ ಆರೋಗ್ಯ ಸೇವೆ ನೀಡಬೇಕಾದರೆ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಇರಲೇಬೇಕು ಎಂದರು.

ಎಲ್ಲರನ್ನೂ ಒಳಗೊಂಡಿರುವ ಸರ್ಕಾರ.

ನಮ್ಮದು ಎಲ್ಲರನ್ನೂ ಒಳಗೊಂಡಿರುವ ಸರ್ಕಾರ. ಯಾವುದೇ ಧರ್ಮ, ಜಾತಿ, ಪಕ್ಷಕ್ಕೆ ಸೇರಿದವರಾಗಿದ್ದರು ಅವರನ್ನು ಭೇದ ಭಾವವಿಲ್ಲದೆ, ಸೀಮಾತೀತವಾಗಿ ಕಾಣುತ್ತೇವೆ.  ಎಲ್ಲ ಜಾತಿ, ಧರ್ಮ, ಪಕ್ಷಗಳಿಗೆ ಸೇರಿದ ಬಡವರಿಗೆ ನಮ್ಮ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಬಡವರಿಗೆ ಆರ್ಥಿಕ ಸಾಮಾಜಿಕ ಶಕ್ತಿ ತುಂಬುವುದು ಇಂದಿನ ಅಗತ್ಯವಾಗಿದ್ದು ಸಂವಿಧಾನದಲ್ಲಿ ಜಾತಿ, ವರ್ಗ ರಹಿತವಾದ ಸಮಾಜ ನಿರ್ಮಾಣ ಮಾಡಬೇಕು ಎಂದು ಸ್ಪಷ್ಟವಾಗಿ ಹೇಳಿದೆ. ಕಟ್ಟಕಡೆಯ ಮನುಷ್ಯನಿಗೂ ಆರ್ಥಿಕ, ಸಾಮಾಜಿಕ ಸೌಲಭ್ಯ ದೊರಕಬೇಕು. ಆಗ ಮಾತ್ರ ಸಂವಿಧಾನದ ಆಶಯವಾದ ಜಾತ್ಯತೀತ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ. ಇದನ್ನು ನಮ್ಮ ಸರ್ಕಾರ ಚಾಚೂ ತಪ್ಪದೇ ಮಾಡುತ್ತಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿಎಂ
Next: ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.