ಬೆಂಗಳೂರು: ಕಳೆದ ಕೆಲವು ದಿನಗಳಿಂದ ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಗಳಲ್ಲಿ ಓಲಾ, ಉಬರ್ ಗಳಿಗೆ ನಿರ್ಬಂಧ ಮಾಡಿರುವ ಕುರಿತಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಚಾಲಕರು ದೂರು ನೀಡಿದರು. ದೂರಿನ ಆಧಾರದ ಮೇಲೆ ಇಂದು (ಗುರುವಾರ ಜ. 08) ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾರಿಗೆ ಸಚಿವರಾಗಿರುವಂತಹ ರಾಮಲಿಂಗ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ವೇಳೆ ಪಾರ್ಕಿಂಗ್ ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಲ್ಲಿನ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಟರ್ಮಿನಲ್ ನಿಂದ ಟ್ಯಾಕ್ಸಿ ಚಾಲಕರಿಗೆ ನೀಡಿರುವ ಪಿಕಪ್ ಪಾಯಿಂಟ್ ದೂರವಿದ್ದು ಪ್ರಯಾಣಿಕರು ಬರಲು ಕಷ್ಟವಾಗುತ್ತೆ ಮೊದಲು ಇದ್ದಲ್ಲೆ ಇವರಿಗೂ ಅವಕಾಶ ನೀಡಬಹುದಲ್ವಾ ಎಂದು ಕೇಳಿದ್ದಾರೆ. ಖಾಸಗಿ ಕಂಪನಿಗಳಿಗೆ ಅನುಕೂಲ ಮಾಡಿಕೊಡಲು ಸ್ಥಳೀಯ ಟ್ಯಾಕ್ಸಿ ಚಾಲಕರಿಗೆ ಅನ್ಯಾಯ ಮಾಡಲು ಹೊರಟಿದ್ದು ಇದು ಸರಿಯಲ್ಲ ಎಂದು ಅಸಮಧಾನ ಹೊರ ಹಾಕಿದರು. ಇದನ್ನೂ ಓದಿ: ಅನಧಿಕೃತ ಕಟ್ಟಡಗಳಿಗೆ ತೆರವು ಆದೇಶ!
ಟರ್ಮಿನಲ್ 1ರ ಬಿಎಂಟಿಸಿ ಬಸ್ ನಿಲ್ದಾಣದಲ್ಲೂ ಕೂಡ 14 ಇದ್ದ ಬಸ್ಗಳನ್ನು 7ಕ್ಕೆ ಇಳಿಸಿರುವುದರಿಂದ ಸಾರ್ವಜನಿಕರಿಗೆ ತೊಂದರೆ ಆಗುವುದಿಲ್ವಾ? ಎಂದು ಏರ್ಪೋಟ್ ಅಧಿಕಾರಿಗಳ ವಿರುದ್ದ ಗರಂ ಆಗಿದ್ದಾರೆ. ಆಡಳಿತ ಮಂಡಳಿ ಜೊತೆ ಸಭೆ ನಡೆಸಿ ಸೂಕ್ತ ನಿರ್ಧಾರ ತೆಗದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
