ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮಧ್ಯೆ ಮೊದಲಿನಿಂದಲೂ ಒಬ್ಬರಿಗೊಬ್ಬರು ಮಾತಿನ ಮೂಲಕವೇ ಟಕ್ಕರ್ ಕೊಡುವುದು ಎಲ್ಲರಿಗೂ ಗೊತ್ತಿರುವ ಸಂಗತಿ.
ಹೌದು, ಹೆಚ್ ಡಿ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ಅವರು ಈಗಾಗಲೇ ಅದೆಷ್ಟೋ ಬಾರಿ ಸಾರ್ವಜನಿಕವಾಗಿಯೇ ಒಬ್ಬರಿಗೊಬ್ಬರು ಬೈದಾಡಿಕೊಳ್ಳುವುದು ಎಲ್ಲರಿಗೂ ಗೊತ್ತಿದೆ. ಇದೀಗ ಮತ್ತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಎಚ್ ಡಿ ಕುಮಾರಸ್ವಾಮಿಯವರಿಗೆ ಟಾಂಗ್ ಕೊಟ್ಟಿದ್ದಾರೆ.
ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು. ಇದನ್ನೂ ಓದಿ: ಮಕರ ಸಂಕ್ರಾಂತಿಯ ಮಹಾಸತ್ಸಂಗ: ಶಾಸಕ ಸತೀಶ್ ರೆಡ್ಡಿ
ಕೆಪಿಸಿಸಿ ಕಚೇರಿಯಲ್ಲಿ ಇಂದು (ಗುರುವಾರ ಜ. 08) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಬಹಳ ಕಾಲ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಡಳಿತ ಹೇಗೆ ಮಾಡಬೇಕು, ಯಾರ ಜೊತೆ ಸಭೆ ಮಾಡಬೇಕು, ಮಾಡಬಾರದು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ತಿರುಗೇಟು ನೀಡಿದರು.
