ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಕಾಮೆಂಟ್ಸ್ ಗಳ ಹಾಕುತ್ತಿರುವುದು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಅದರಲ್ಲೂ ಕೂಡ ಸ್ಟಾರ್ ನಟ-ನಟಿಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ಸ್ ಗಳ ಮೂಲಕ ನಿಂದಿಸುವುದು ಹೆಚ್ಚಾಗಿ ಕಂಡುಬರುತ್ತಿದೆ.
ಇದಕ್ಕೆ ದೊಡ್ಡ ಉದಾಹರಣೆ ಎಂಬಂತೆ ಈಗಾಗಲೇ ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರಿಗೆ ಅಶ್ಲೀಲ ಕಾಮೆಂಟ್ ಹಾಕಿದರು. ಅದರ ಬೆನಲ್ಲೇ ಮತ್ತೆ ಇದೀಗ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಗೂ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ಕಾಮೆಂಟ್ಸ್ ಗಳ ಹಾಕುವ ಮೂಲಕ ನಿಂದಿಸಿದ್ದರು ಎಂಬ ಕಾರಣಕ್ಕೆ ವಿಜಯಲಕ್ಷ್ಮಿ ಅವರು ಸೈಬರ್ ಕ್ರೈಂ ಗೆ ದೂರು ನೀಡಿದ್ದರು.
ವಿಜಯಲಕ್ಷ್ಮಿ ಅವರ ದೂರನ್ನು ಪರಿಗಣಿಸಿ ಇದೀಗ ಅಶ್ಲೀಲ ಕಮೆಂಟ್ ಹಾಕಿದವರ 6 ಆರೋಪಿಗಳ ಬಂದನ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಹೌದು, ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಪ್ರಕರಣದ ತನಿಖೆ ಕೊನೇ ಹಂತಕ್ಕೆ ಬಂದು ನಿಂತಿದೆ. ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಕಾಮೆಂಟ್ ಮಾಡಿದ್ದವರ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕಾಮೆಂಟ್ ಮಾಡಿ ತಲೆಮರಿಸಿಕೊಂಡಿದ್ದವರಲ್ಲಿ 6 ಮಂದಿಯನ್ನ ಪೊಲೀಸರು ಬಂಧನ ಮಾಡಿ ಜೈಲಿಗಟ್ಟಿದ್ದಾರೆ. ಇದನ್ನೂ ಓದಿ: ಕಾಲೇಜಿಗೆ ರಜೆ ಹಾಕಿದ್ದಕ್ಕೆ ಅವಮಾನ, ಕಿರುಕುಳ ತಾಳಲಾರದೇ ವಿದ್ಯಾರ್ಥಿನಿ ಆತ್ಮಹತ್ಯೆ
ಬಂಧಿತ ಆರೋಪಿಗಳಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ಪೆಟ್ರೋಲ್ ಬಂಕ್ ಮ್ಯಾನೇಜರ್ ಕೂಡ ಸೇರಿದ್ದಾರೆ. ಬಂಧಿತ ಆರೋಪಿಗಳ ವಿರುದ್ಧ 60 ದಿನ ಗಳಲ್ಲಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಬೇಕಿತ್ತು. ಹಾಗಾಗಿ ಬಂಧಿತರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಿ ಉಳಿದ ಆರೋಪಿಗಳು ನಾಪತ್ತೆಯಾಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
