ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, KKRDB ಮತ್ತು ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿಯಲ್ಲಿ ಆಯೋಜಿಸಿರುವ ಪ್ರಜಾಸೌಧ, ಕೆ.ಪಿ.ಎಸ್ ಶಾಲೆಗಳು ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
AICC ಅಧ್ಯಕ್ಷರೂ, ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರೂ ಆದ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಕೃಷ್ಣಬೈರೇಗೌಡ, ಸಚಿವರಾದ ದರ್ಶನಾಪುರ, ರಹೀಂ ಖಾನ್, ಮಧು ಬಂಗಾರಪ್ಪ, KKRDB ಅಧ್ಯಕ್ಷರೂ ಶಾಸಕರೂ ಆದ ಅಜಯ್ ಸಿಂಗ್, ಶಾಸಕರಾದ ಅಲ್ಲಮ ಪ್ರಭು ಪಾಟೀಲ್, ಎಂ.ವೈ.ಪಾಟೀಲ್, ಖನಿಜ್ ಫಾತಿಮಾ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.
