ಬೆಂಗಳೂರು: ಇಷ್ಟು ದಿನ ನೆನೆ ಗುದಿಗೆ ಬಿದ್ದಿದ್ದ ಸ್ಥಳೀಯ ಸಂಸ್ಥೆಳ ಚುನಾವಣೆಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ಸಿಗ್ನಲ್ ನೀಡಿದ್ದಾರೆ.
ಬೆಂಗಳೂರು ಅರಮನೆ ಮೈದಾನದಲ್ಲಿ ಇಂದು (ಮಂಗಳವಾರ ಜ. 13)ಏರ್ಪಡಿಸಿದ್ದ ಮನರೇಗಾ ಉಳಿಸಿ ಆಂದೋಲನ ಆಯೋಜನೆ, ಬಿಎಲ್ಎ ಪಟ್ಟಿ, ಸ್ಥಳೀಯ ಸಂಸ್ಥೆ ಚುನಾವಣೆ ಕುರಿತ ಪೂರ್ವಭಾವಿ ಸಭೆ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು.
ಸುಪ್ರೀಂ ಕೋರ್ಟ್ ಆದೇಶದ ಅನುಸಾರ ನಿಗದಿತ ದಿನಾಂಕದ ಒಳಗೆ ಜಿಬಿಎ ಪಾಲಿಕೆಗಳ ಚುನಾವಣೆ ನಡೆಸಲಾಗುವುದು. ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ನಿರ್ದೇಶನ ನೀಡಲಾಗುವುದು. ರಾಜ್ಯ ಚುನಾವಣಾ ಆಯೋಗವು ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿದೆ. ಅದು ಅವರಿಗೆ ಬಿಟ್ಟ ವಿಚಾರ. ಸರ್ಕಾರ ಎಲ್ಲಾ ರೀತಿಯ ಆದೇಶ ನೀಡಲಿದೆ. ನಮಗೆ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿಗಳಾದ ಗೋಪಿನಾಥ್ ಪಳನಿಯಪ್ಪನ್, ಮಯೂರ್ ಜೈಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್, ಸಚಿವರಾದ ಕೆ ಜೆ ಜಾರ್ಜ್, ಕೆ ಎಚ್ ಮುನಿಯಪ್ಪ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತಿತರರು ಉಪಸ್ಥಿತರಿದ್ದರು.
