ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಮಾಡಿಕೊಂಡು ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿತು.
ಅದರಂತೆ ಇದೀಗ ಸ್ಥಳೀಯ ಚುನಾವಣೆಗೂ ಕೂಡ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಇದೀಗ ಸ್ಥಳೀಯ ಚುನಾವಣೆಗೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಮಾಡಿಕೊಂಡು ಸ್ಥಳೀಯ ಚುನಾವಣೆ ಎದುರಿಸುತ್ತದೆಯೇ ಎಂದು ಎಲ್ಲರಲ್ಲೂ ಪ್ರಶ್ನೆ ಮೂಡಿತು
ಆದರೆ ಈ ಕುರಿತು ಇದೀಗ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಸ್ಥಳೀಯ ಚುನಾವಣೆಯಲ್ಲಿ ನಾವು ಬಿಜೆಪಿ ಜೊತೆ ಮೈತ್ರಿ ಮುಕ್ತವಾಗಿದ್ದೇವೆ ಎಂದು ಹೇಳಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂಬ ದೇವೇಗೌಡರ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ಅವರು, ಜಿಬಿಎ-ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ವಿಷಯದಲ್ಲಿ ನಾವು ಮುಕ್ತವಾಗಿದ್ದೇವೆ. ನಮ್ಮಿಂದ ಮೈತ್ರಿ ಗೊಂದಲಕ್ಕೆ ಎಡೆ ಮಾಡಿಕೊಡಬಾರದು ಎಂಬುದು ನಮ್ಮ ಅಭಿಪ್ರಾಯ. ಮುಂದಿನ ದಿನಗಳಲ್ಲಿ ಯಾವ ರೀತಿ ರಾಜಕೀಯ ಬೆಳವಣಿಗೆ, ಸ್ಥಳೀಯವಾಗಿ ಬಿಜೆಪಿ ನಾಯಕರ ತೀರ್ಮಾನ ಏನಿದೆ? ಇದೆಲ್ಲವನ್ನು ನೋಡಿಕೊಂಡು ತೀರ್ಮಾನ ಮಾಡ್ತೀವಿ ಎಂದಿದ್ದಾರೆ.
ಮೈತ್ರಿ ವಿಷಯದಲ್ಲಿ ಮುಕ್ತವಾದ ಅವಕಾಶ ಇಟ್ಟುಕೊಂಡಿದ್ದೇವೆ. ಆ ಸಮಯಕ್ಕೆ ಏನಾಗಬೇಕು. ರಾಜ್ಯಕ್ಕೆ ಉತ್ತಮ ಆಡಳಿತ ಕೊಡಲು, ಬೆಂಗಳೂರಿನಲ್ಲಿ ಅನೇಕ ವರ್ಷಗಳಿಂದ ಅಭಿವೃದ್ಧಿ ಸ್ಥಗಿತವಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಬರೀ ಲೂಟಿ ಆಗ್ತಿದೆ. ಕಸ ವಿಲೇವಾರಿ, ಗುಂಡು ಮುಚ್ಚುವುದು, ಯಾವ ಯಾವ ರೀತಿ ಪಕ್ಷಗಳ ನಡವಳಿಕೆ, ಪಕ್ಷದ ಕೊಡುಗೆ ಏನು ಅಂತ ಇಟ್ಟುಕೊಂಡು ಜನರ ಬಳಿ ಹೋಗಬೇಕು. ಮುಂದೆ ಏನ್ ಡೆವಲಪ್ಮೆಂಟ್ ಆಗುತ್ತೋ ನೋಡೋಣ ಎಂದು ಹೇಳಿದ್ದಾರೆ.
