ಬೆಂಗಳೂರು: ಕನ್ನಡವನ್ನು ಉಳಿಸಿ ಬೆಳೆಸುವುದು ಕೇವಲ ಕೆಲ ಸಂಘಟನೆಗಳ ಕಾರ್ಯವಲ್ಲ, ಕನ್ನಡಿಗರಾದ ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿ ಎಂದು ಮಾಜಿ ಸಚಿವ ಅರವಿಂದ್ ಲಿಂಬಾವಳಿಯವರು ಹೇಳಿದರು.
ಬೆಂಗಳೂರು ಅರಮನೆ ಮೈದಾನದಲ್ಲಿ ನಮ್ಮ ಕರ್ನಾಟಕ ಸೇನೆಯ 3ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡದ ಭಾಷಾಭಿಮಾನ, ಕರ್ನಾಟಕ ನಾಡು ನುಡಿಯ ಸಂರಕ್ಷಣೆಯ ಉದ್ದೇಶದಿಂದ ನಮ್ಮ ಕರ್ನಾಟಕ ಸೇನೆಯ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ. ಅನೇಕ ಕಲಾವಿಧರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಅವರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದರು.
ಅನ್ಯ ಭಾಷಿಕರ ಜೊತೆಗೂ ನಾವು ಕನ್ನಡವನ್ನು ಮಾತಾಡಿ ಅವರಿಗೂ ಕೂಡ ಕನ್ನಡ ಕಲಿಸುವ ಪ್ರಯತ್ನ ಮಾಡಬೇಕು ಮತ್ತು ನಾವು ಪ್ರೀತಿಯಿಂದ ಸಂವಹನ ನಡೆಸಿದಾಗ ಪ್ರತಿಯೊಬ್ಬರೂ ಕನ್ನಡವನ್ನು ಕಲಿಯುವ ಪ್ರಯತ್ನ ಮಾಡುತ್ತಾರೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕನ್ನಡವನ್ನು ಕರ್ನಾಟಕವನ್ನು ರಕ್ಷಣೆ ಮಾಡುವಲ್ಲಿ ಒಟ್ಟಾಗಬೇಕು ಎಂದು ಹೇಳಿದರು. ಇದನ್ನೂ ಓದಿ: ಪಾಲಿಕೆ ವ್ಯಾಪ್ತಿಯ ಮುಖ್ಯ ರಸ್ತೆಗಳಲ್ಲಿ ಸ್ವಚ್ಛತೆ ಕಾರ್ಯ
ಈ ಸಂದರ್ಭದಲ್ಲಿ ನಮ್ಮ ಕರ್ನಾಟಕ ಸೇನೆ ರಾಜ್ಯಾಧ್ಯಕ್ಷರಾದ ಶ್ರೀ ಎಂ ಬಸವರಾಜ್ ಪಡುಕೋಣೆ, ವಿವಿಧ ರಾಜಕೀಯ ಪಕ್ಷದ ಮುಖಂಡರು ಹಾಗೂ ಕನ್ನಡಾಭಿಮಾನಿಗಳು ಉಪಸ್ಥಿತರಿದ್ದರು.
