Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಿರಿಯ ಮೋಟಾರು ವಾಹನ ನಿರೀಕ್ಷಕರಿಗೆ ಅಮಾನತು ಆದೇಶ: ರಾಮಲಿಂಗಾ ರೆಡ್ಡಿ
  • Bangalore
  • Crime
  • Politics
  • State

ಹಿರಿಯ ಮೋಟಾರು ವಾಹನ ನಿರೀಕ್ಷಕರಿಗೆ ಅಮಾನತು ಆದೇಶ: ರಾಮಲಿಂಗಾ ರೆಡ್ಡಿ

Praja Vahini January 21, 2026 1 minute read
WhatsApp Image 2026-01-21 at 21.04.08
Spread the love

ಬೆಂಗಳೂರು: ನಿಸಾರ್ ಆಹಮ್ಮದ್, ಹಿರಿಯ ಮೋಟಾರು ವಾಹನ ನಿರೀಕ್ಷಕರು ಇವರು ಗುಜರಾತ್ ರಾಜ್ಯದ ವಾಹನಗಳಿಗೆ ನಿಯಮಬಾಹಿರವಾಗಿ Fitness Certificate ನೀಡಿದ್ದು ಕರ್ತವ್ಯ ಲೋಪ ಎಸಗಿರುವ ಹಿನ್ನೆಲೆಯಲ್ಲಿ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರ ಆದೇಶದ ಮೇರೆಗೆ ನಿಸಾರ್ ಆಹಮ್ಮದ್ ರನ್ನು ಅಮಾನತು ಮಾಡಲು ಆಯುಕ್ತರು ಸಾರಿಗೆ ಇಲಾಖೆ ಆದೇಶ ನೀಡಿದ್ದಾರೆ.

ಗುಜರಾತ್ ರಾಜ್ಯದ ಸಾರಿಗೆ ಕಛೇರಿಯ ಇ-ಡಿಟೆಕ್ಷನ್ ತಂಡವು ವಾಹನ ಇ-ಡಿಟೆಕ್ಷನ್ ಪೋರ್ಟಲ್‌ ನ ಲ್ಲ್ಲಿ ಲಭ್ಯವಿರುವ ಡೇಟಾವನ್ನು ಪರಿಶೀಲಿಸಿ 41 ವಾಹನಗಳನ್ನು ಕರ್ನಾಟಕ ರಾಜ್ಯದ ಆರ್ ಟಿ ಒ ಕಚೇರಿಗಳಲ್ಲಿ ತಪಾಸಣೆ ಮಾಡಿ ನಮೂನೆ-38 (ಎ) (Fitness Certificate] ನೀಡಿದ ನಂತರ, ಅದೇ ದಿನ ಗುಜರಾತ್ ರಾಜ್ಯದಲ್ಲಿರುವ ಟೋಲ್ ಪ್ಲಾಜಾಗಳ ಮೂಲಕ ಸದರಿ ವಾಹನಗಳು ಹಾದುಹೋಗಿವೆ ಎಂದು ಹಾಗೂ ಅವುಗಳನ್ನು ಶ್ರೀ ನಿಸಾರ್ ಅಹಮದ್ ಇವರು ಅನುಮೋದಿಸಿರುವುದಾಗಿ ಉಪ ನಿರ್ದೇಶಕರು, ಸಾರಿಗೆ ಆಯುಕ್ತರ ಕಛೇರಿ, ಗಾಂಧಿನಗರ, ಗುಜರಾತ್ ರವರು ತಿಳಿಸಿರುತ್ತಾರೆ.

ಈ ವಿಷಯವು ಸಾರಿಗೆ ಸಚಿವರ ಗಮನಕ್ಕೆ ಬಂದ ಕೂಡಲೇ ಈ ಬಗ್ಗೆ  ಆಯುಕ್ತರು ಸಾರಿಗೆ ಇಲಾಖೆ ರವರಿಗೆ ಕ್ರಮಕೈಗೊಳ್ಳಲು ಸೂಚಿಸಿದರು. ಅದರಂತೆ,ಆಯುಕ್ತರು ರವರು ಬೆಂಗಳೂರು ನಗರ ವಿಭಾಗದ ಜಂಟಿ ಸಾರಿಗೆ ಆಯುಕ್ತರು ಅವರಿಗೆ ವರದಿ ನೀಡಲು ಸೂಚಿಸಿದರು‌.

ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ, ಬೆಂಗಳೂರು (ಕೇಂದ್ರ) ದಲ್ಲಿರುವ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ಶ್ರೀ ನಿಸ್ಸಾರ್ ಅಹಮದ್ ರವರು ವಾಹನಗಳಿಗೆ ನಮೂನೆ-38(ಎ) ರಲ್ಲಿ ಅರ್ಹತಾ ಪತ್ರ ನವೀಕರಣ ಮಾಡಿರುವುದಾಗಿ ಇಲಾಖೆ ವಾಹನ್ 4.0 ತಂತ್ರಾಂಶದನ್ವಯ ದೃಢಪಟ್ಟಿರುತ್ತದೆ ಹಾಗೂ ಸದರಿ 41 ವಾಹನಗಳು ಅದೇ ದಿನ ಅಂದರೆ ತಪಾಸಣೆ ನಡೆಸಿದ ದಿನಾಂಕದಂದು ಗುಜರಾತ್ ರಾಜ್ಯದಲ್ಲಿರುವ ಟೋಲ್ ಪ್ಲಾಜಾಗಳ ಮೂಲಕ ಹಾದುಹೋಗಿರುವುದು ಸಹ ಕಂಡುಬಂದಿರುತ್ತದೆ.

ಇದರಿಂದ ವಾಹನಗಳನ್ನು ಭೌತಿಕವಾಗಿ ಪರಿಶೀಲನೆ ಮಾಡದೇ ನಮೂನೆ-38(ಎ) ನ್ನು ನಿಯಮಬಾಹಿರವಾಗಿ ಅನುಮೋದಿಸಿರುವುದು ಕಂಡುಬಂದಿರುತ್ತದೆ. ಇದರಿಂದಾಗಿ ಮೋಟಾರು ವಾಹನಗಳ ಕಾಯ್ದೆ ಮತ್ತು ನಿಯಮಗಳನ್ನು ಉಲಂಘಿಸಿದ್ದು, ವಾಹನಗಳನ್ನು ಭೌತಿಕವಾಗಿ ಪರಿಶೀಲನೆ ಮಾಡದೇ ಅನುಮೋದಿಸುವ ಮೂಲಕ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿರುತ್ತದೆ. ಆದ್ದರಿಂದ ಅವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿರುತ್ತಾರೆ.

About the Author

Praja Vahini

Editor

View All Posts

Spread the love

Post navigation

Previous: ಶಿವರಾಜ್ ಕುಮಾರ್ ಭೇಟಿಯಾದ ಗಿಲ್ಲಿನಟ
Next: 2  ಬೈಕ್ ಮುಖಾಮುಖಿ ಡಿಕ್ಕಿ ಇಬ್ಬರು ಸಾವು

Views:

63

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.