Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪೌರಾಡಳಿತ ಇಲಾಖೆ ಅಧಿಕಾರಿಗಳ ಸಂಘದ ಹೊಸ ವರ್ಷದ ಕ್ಯಾಲೆಂಡರ್ ಮತ್ತು ಡೈರಿ ಲೋಕಾರ್ಪಣೆ
  • Bangalore
  • Front news
  • Politics
  • State

ಪೌರಾಡಳಿತ ಇಲಾಖೆ ಅಧಿಕಾರಿಗಳ ಸಂಘದ ಹೊಸ ವರ್ಷದ ಕ್ಯಾಲೆಂಡರ್ ಮತ್ತು ಡೈರಿ ಲೋಕಾರ್ಪಣೆ

Praja Vahini January 23, 2026
13e1057f-e1e2-4527-8301-bea5cb987519
Spread the love

ಬೆಂಗಳೂರು: ಈ ವರ್ಷದ ಕ್ಯಾಲೆಂಡರ್ ಮತ್ತು ಡೈರಿಯನ್ನು ಮಾನ್ಯ ಪೌರಾಡಳಿತ ಮತ್ತು ಸಚಿವರು ಲೋಕಾರ್ಪಣೆಗೊಳಿಸಿ ಅಧಿಕಾರಿಗಳು ಮತ್ತು ಇಲಾಖೆಯ ನೌಕರರಿಗೆ ಶುಭಾಶಯ ಕೋರಿದರು.

ಸರ್ಕಾರದ ಎಲ್ಲಾ ಜನಪರ ಯೋಜನೆಗಳಾದಂತಹ ಎ ಖಾತಾ, ಬಿ ಖಾತಾ, ಇಂದಿರಾ ಕ್ಯಾಂಟೀನ್, ಎಸ್ಎಫ್ ಸಿ, ನಗರೋತ್ಥಾನ, ಎಸ್ ಬಿ ಎಂ, ಈ ಎಲ್ಲಾ ಯೋಜನೆಗಳು ತಮ್ಮ ಮೂಲಕ ರಾಜ್ಯದ ಜನಸಾಮಾನ್ಯರಿಗೆ ತ್ವರಿತ ಗತಿಯಲ್ಲಿ ಸೇವೆ ನೀಡುವುದರ ಮೂಲಕ ಜನಸ್ನೇಹಿ ಆಡಳಿತವನ್ನು ನೀಡಬೇಕೆಂದು ತಿಳಿಸಿದರು.

ಪೌರಾಡಳಿತ ಇಲಾಖೆಯಲ್ಲಿ ಹುಟ್ಟಿನಿಂದ ಸಾವಿನವರೆಗೆ ಜನರಿಗೆ ಎಲ್ಲಾ ಸೇವೆಗಳನ್ನು ನೀಡುವುದರಿಂದ ಅಧಿಕಾರಿಗಳು ತಾಳ್ಮೆ, ಸಂಯಮ, ವಿಶ್ವಾಸದಿಂದ ಜನರೊಂದಿಗೆ ವ್ಯವಹರಿಸುವುದರಿಂದ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲು ಸಾಧ್ಯ.

ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಬಾಕಿ ಇದ್ದ ವೃಂದ ಮತ್ತು ನೇಮಕಾತಿ ನಿಯಮವನ್ನು ನನ್ನ ಕಾಲಾವಧಿಯಲ್ಲಿ ಅಂತಿಮಗೊಳಿಸಿ ಅನುಕೂಲ ಕಲ್ಪಿಸಲಾಗಿದೆ. ಸ್ಥಳ ನಿರೀಕ್ಷಣೆಯಲ್ಲಿರುವ ಎಲ್ಲಾ ಅಧಿಕಾರಿ ಮತ್ತು ನೌಕರರುಗಳಿಗೆ ಕಾಲಕಾಲಕ್ಕೆ ಸ್ಥಳನಿಯುಕ್ತಿಗೊಳಿಸಲಾಗಿದೆ. ಅಲ್ಲದೆ ಇಲಾಖೆಯ ಬೇರೆ ಬೇರೆ ವೃಂದದ ಬಹುತೇಕರಿಗೆ ಮುಂಬಡ್ತಿ ನೀಡಿ ಉತ್ತೇಜಿಸಲಾಗಿದೆ.

ಬಹುತೇಕ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಧಿಕಾರಿ ಮತ್ತು ನೌಕರರ ಕೊರತೆ ಇದ್ದರೂ ಕೂಡ ಅದೆಲ್ಲವನ್ನು ಸರಿದೂಗಿಸಿಕೊಂಡು ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಹೇಳುತ್ತಾ ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕೆಂದು ಕರೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಹುದ್ದೆಗಳಲ್ಲಿ ಕೆಎಂಎಎಸ್ ಅಧಿಕಾರಿಗಳಿಗೂ ಕೂಡ ವೃಂದ ಮತ್ತು ನೇಮಕಾತಿಯಲ್ಲಿ ಅವಕಾಶ ಕಲ್ಪಿಸಬೇಕೆಂಬ ಬೇಡಿಕೆಗೆ ಮಾನ್ಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿ ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಮನವರಿಕೆ ಮಾಡಿಕೊಡಲಾಗುವುದೆಂದು ಭರವಸೆ ನೀಡಿದರು.

About the Author

Praja Vahini

Editor

View All Posts

Spread the love

Post navigation

Previous: ಇಂದಿರಾನಗರದಲ್ಲಿ ‘ಒರಿಜಿನಲ್‌ ಮೈಲಾರಿ ಹೋಟೆಲ್‌-1938’ಗೆ ಅದ್ಧೂರಿ ಚಾಲನೆ
Next: ಸನ್‌ಡಾನ್ಸ್ ಚಲನಚಿತ್ರೋತ್ಸವದಲ್ಲಿ ಕನ್ನಡತಿಯ ಕಂಪು

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.