Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಮ್ಮ ಸೇವೆ ಜನರಿಗಾಗಿಯೇ ಹೊರತು ಕುಟುಂಬಕ್ಕಾಗಿ ಅಲ್ಲ: ಡಿ.ಕೆ. ಶಿವಕುಮಾರ್
  • Bangalore
  • Politics
  • State

ನಮ್ಮ ಸೇವೆ ಜನರಿಗಾಗಿಯೇ ಹೊರತು ಕುಟುಂಬಕ್ಕಾಗಿ ಅಲ್ಲ: ಡಿ.ಕೆ. ಶಿವಕುಮಾರ್

Praja Vahini January 26, 2026 1 minute read
WhatsApp Image 2026-01-26 at 20.01.09
Spread the love

ಬೆಂಗಳೂರು: ನಾವು ಸೇವೆ ಮಾಡುತ್ತಿರುವುದು ನಾಡಿನ ಜನತೆಗಾಗಿ. ಕುಟುಂಬಕ್ಕಾಗಿಯಲ್ಲ. ಕುಟುಂಬದ ಆಸೆ, ಭಾವನೆಗಳು, ತೊಂದರೆಯಲ್ಲಿ ಇರುವದರ ಬಗ್ಗೆ ಅವರು ಮಾತನಾಡಿಕೊಳ್ಳಲಿ. ನಾವು ಈ ದೇಶದ ಜನತೆಯ ಹಿತಕ್ಕಾಗಿ ರಾಜಕಾರಣ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ ಎಂದರು.

ಪ್ರತಿವರ್ಷ 6 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ ಎಂದರು‌.

ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದರು.‌ ಇದನ್ನೂ ಓದಿ: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ

ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಲಾಗುವುದು ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದ ಸಿಎಂ
Next: ಬೆಂ.ಗ್ರಾ ಜಿಲ್ಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.