ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ದೇವನಹಳ್ಳಿ ಟೌನ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ “77ನೇ ಗಣರಾಜ್ಯೋತ್ಸವ”ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ತ್ರಿವರ್ಣ ಧ್ವಜಕ್ಕೆ ಗೌರವ ನಮನ ಸಲ್ಲಿಸಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ವಂದನೆ ಅರ್ಪಿಸಿದರು.
ಇದೇ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತರಾದ ಆರ್. ನಾರಾಯಣಸ್ವಾಮಿ ಹಾಗೂ ಅಂಗಾಂಗ ದಾನ ಮಾಡಿರುವ ಕುಟುಂಬದ ಸದಸ್ಯರಿಗೆ ಪ್ರಶಂಸನಾ ಪತ್ರ ನೀಡಿ, ಗೌರವಿಸಲಾಯಿತು. ಇದನ್ನೂ ಓದಿ: ನಮ್ಮ ಸೇವೆ ಜನರಿಗಾಗಿಯೇ ಹೊರತು ಕುಟುಂಬಕ್ಕಾಗಿ ಅಲ್ಲ: ಡಿ.ಕೆ. ಶಿವಕುಮಾರ್
ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಡಾ.ಕೆ ಸುಧಾಕರ್, ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ. ನಾರಾಯಣಸ್ವಾಮಿ, ಬಯಪ ಅಧ್ಯಕ್ಷರಾದ ವಿ. ಶಾಂತಕುಮಾರ್, ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್. ಅನುರಾಧ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ್ ಎಂ.ವಿ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಮುಖಂಡರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
