Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ವಿರೋಧಿಸುತ್ತದೆ
  • Bangalore
  • Front news
  • Politics
  • State

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ವಿರೋಧಿಸುತ್ತದೆ

Praja Vahini January 27, 2026 1 minute read
a223ee4e-4b13-4ee2-86a4-555ca843750a
Spread the love

ಬೆಂಗಳೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತಿದ್ದು, ವಿಬಿ ರಾಮ್ ಜಿ ರದ್ದುಪಡಿಸಿ ನರೇಗಾ ಪುನರ್ಸ್ಥಾಪನೆಯಾಗುವವರೆಗೆ ಹೋರಾಟ ಮುಂದುವರೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ‘ಮನರೇಗಾ ಬಚಾವ್ ಸಂಗ್ರಾಮ್” ಅಂಗವಾಗಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆ ಹಾಗೂ ರಾಜ್ ಭವನ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇತ್ತೀಚೆಗೆ ಬಿಜೆಪಿಯವರು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆ (MGNREGA) ಕಾಯ್ದೆಯನ್ನು ರದ್ದು ಮಾಡಿ, ದುರುದ್ದೇಶದಿಂದ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದ್ದಾರೆ. ಹೊಸ ಕಾಯ್ದೆಗೆ ವಿಕಸಿತ ಭಾರತ- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕ ಮಿಶನ್ (ಗ್ರಾಮೀಣ) ಎಂಬ ಹೆಸರಿಟ್ಟಿದ್ದಾರೆ ಎಂದು ತಿಳಿಸಿದರು.

ಬಡವರ ಬಗ್ಗೆ ಕಾಂಗ್ರೆಸ್ ಪಕ್ಷ ಮಾತ್ರವೇ ಚಿಂತಿಸುತ್ತದೆ
2005 ರಲ್ಲಿ ಮನಮೋಹನ್ ಸಿಂಗ್ ಪ್ರದಾನಿಯಾಗಿದ್ದ ಸಂದರ್ಭದಲ್ಲಿ ನರೇಗಾ ಕಾಯ್ದೆಯನ್ನು ಜಾರಿಗೆ ತಂದಿದ್ದರು. ಅಂತೆಯೇ ಆಹಾರ ಹಕ್ಕು, ಕೆಲಸದ ಹಕ್ಕು, ಶಿಕ್ಷಣ ಹಕ್ಕು, ಮಾಹಿತಿ ಹಕ್ಕು, ಅರಣ್ಯ ಕಾಯ್ದೆ ಗಳನ್ನು ಕಾಂಗ್ರೆಸ್ನ ಸರ್ಕಾರದ ಅವಧಿಯಲ್ಲಿಯೇ ಜಾರಿಗೆ ಬಂದ ಜನಪರ ಕಾಯ್ದೆಗಳಾಗಿದ್ದುವು. ಕಾಂಗ್ರೆಸ್ ಸರ್ಕಾರ ಎಂದಿಗೂ ಮಹಿಳೆಯರಿಗೆ, ದಲಿತರಿಗೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಸಣ್ಣ ರೈತರು ಬಗ್ಗೆ ಕೇವಲ ಕಾಂಗ್ರೆಸ್ ಪಕ್ಷ ಮಾತ್ರ ಚಿಂತನೆ ಮಾಡುತ್ತದೆ ಎಂದರು. ಇದನ್ನೂ ಓದಿ: ವಿಬಿ ಜಿ ರಾಮ್ ಜಿ ಕಾಯ್ದೆ-ಗ್ರಾಮೀಣ ಪ್ರದೇಶದ ಬಡ ಕಾರ್ಮಿಕರಿಗೆ ಮಾರಕ: ಸಿಎಂ

ಬಡವರು ಸೇವಕರಾಗಿಯೇ ಇರಲು ಬಿಜೆಪಿ-ಆರ್ ಎಸ್ ಎಸ್ ನ ಕುತಂತ್ರ
ಬಿಜೆಪಿಯವರು ಈ ಜನಪರ ಯೋಜನೆಗಳನ್ನು ನಾಶಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಉದ್ಯೋಗ ಸಿಗದಂತೆ ಮಾಡಲಾಗುತ್ತಿದೆ. ಸುಮಾರು ಶೇ. 53 ರಷ್ಟು ಮಹಿಳೆಯರು, ಶೇ. 28 ರಷ್ಟು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರು ಮತ್ತು ಸುಮಾರು 5 ಲಕ್ಷ ಅಂಗವಿಕಲರು ಕೂಲಿ ಕೆಲಸದಲ್ಲಿ ನಿರತರಾಗಿದ್ದು, ನರೇಗಾ ಯೋಜನೆಯಿಂದ ಎಲ್ಲರಿಗೂ ಉದ್ಯೋಗ ಸಿಗುವಂತಾಗಿತ್ತು. ಆದರೆ ಕೇಂದ್ರ ಸರ್ಕಾರ, ಆರ್ ಎಸ್ ಎಸ್ ಅವರ ಜೊತೆಗೂಡಿ ಬಡಜನರು ಸದಾ ಸೇವಕರಾಗಿಯೇ ಇರಬೇಕೆಂದು ಹುನ್ನಾರ ಮಾಡಿದ್ದಾರೆ ಎಂದರು.

ಬಡವರ ಕೆಲಸವನ್ನು ದಿಲ್ಲಿಯಲ್ಲಿ ನಿರ್ಧರಿಸುವುದು ತಪ್ಪು
ಬಿಜೆಪಿಯವರು ಕಾಂಗ್ರೆಸ್ ನ ಜನಪರ ಗ್ಯಾರಂಟಿ ಯೋಜನೆಗಳ ಬಗ್ಗೆ ‘ವೋಟ್ ಗಾಗಿ ಮಾಡಿದ ಯೋಜನೆಗಳು’ ಎಂದು ಟೀಕಿಸುತ್ತಿದ್ದರು. ಮಹಿಳೆಯರಿಗೆ, ದಲಿತರಿಗೆ ಹಿಂದುಳಿದವರಿಗೆ, ಅಲ್ಪಸಂಖ್ಯಾತರಿಗೆ ಸಣ್ಣ ರೈತರು ನರೇಗಾ ಯಿಂದ ವರ್ಷದ ಯಾವುದೇ ದಿನಗಳಲ್ಲಿ ಕೆಲಸ ಮಾಡಬಹುದಿತ್ತು. ಗ್ರಾಮಸಭೆಗಳು ಹಾಗೂ ಗ್ರಾಮ ಪಂಚಾಯತಿಗಳು ಈ ಮೊದಲು ಕೆಲಸವನನ್ನು ನಿರ್ಧರಿಸಲಾಗುತ್ತಿತ್ತು. ಆದರೆ ಈಗ ಬಡವರ ಗ್ರಾಮೀಣ ಬಡಜನರ ಕೆಲಸವನ್ನು ಸ್ಥಳೀಯ ಗ್ರಾಮೀಣ ಆಡಳಿತ ಬಿಟ್ಟು , ದಿಲ್ಲಿಯಲ್ಲಿ ನಿರ್ಧರಿಸಲಾಗುತ್ತದೆ ಎಂದರು.

ಮನರೇಗಾ ದಿಂದ 100 ದಿನಗಳ ಕೆಲಸದ ಭರವಸೆಯಿತ್ತು

ಎಲ್ಲ ಗ್ರಾಮಪಂಚಾಯತಿಗಳಲ್ಲಿ ಬಡ ಕೂಲಿ ಕಾರ್ಮಿಕರಿಗೆ ಕೆಲಸ ಸಿಗುವ ಅವಕಾಶವಿಲ್ಲ. ನರೇಗಾ ಯೋಜನೆಯಿಂದ, ಹಿಂದೆ ಕೂಲಿಗಾರರಿಗೆ 100 ದಿನಗಳ ಕೆಲಸ ಖಾತ್ರಿಯಾಗಿ ಸಿಗುತ್ತಿತ್ತು. ಬಡವರ ಕೆಲಸದ ಹಕ್ಕು ಸಂವಿಧಾನಬದ್ಧವಾದದ್ದು, ಆದರೆ ವಿಬಿ ರಾಮ್ ಜಿ ಯ ಜಾರಿಯಿಂದ ಈ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಈ ಹಿಂದೆ ನರೇಗಾ ಅಡಿಯಲ್ಲಿ ವೆಚ್ಚಮಾಡಲಾಗುವ ಅನುದಾನವನ್ನು ಕೇಂದ್ರ ಸರ್ಕಾರವೇ ನೀಡುತ್ತಿತ್ತು. ಈಗ ಈ ಅನುದಾನವನ್ನು ನಿಲ್ಲಿಸಲಾಗಿದ್ದು, ಕೇಂದ್ರದ ಈ ಹೊಸ ಕಾಯ್ದೆಯಂತೆ ಶೇ. 40 ರಷ್ಟು ರಾಜ್ಯ ಸರ್ಕಾರಗಳು ಕೊಟ್ಟು, ಕೇಂದ್ರ ಶೇ. 60 ರಷ್ಟು ಮಾತ್ರ ಪಾವತಿಸುತ್ತವೆ ಎಂದರು.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಕಾಂಗ್ರೆಸ್ ಪಕ್ಷ ವಿರೋಧಿಸುತ್ತದೆ

ಕೇಂದ್ರದ ಇಂತಹ ಜನವಿರೋಧಿ ನೀತಿಯಿಂದ ಹಲವು ರಾಜ್ಯಗಳು ಕಷ್ಟಕ್ಕೆ ಸಿಲುಕಿವೆ. ಆದ್ದರಿಂದ ನಮ್ಮ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ, ಕೇಂದ್ರದ ನೀತಿಯ್ನು ಪ್ರತಿಭಟಿಸುತ್ತಿದೆ. ಈ ಕಾಯ್ದೆಯನ್ನು ರದ್ದುಪಡಿಸಿ, ಪುನ: ನರೇಗಾ ವನ್ನು ಪುನರ್ ಸ್ಥಾಪಿಸುವವರೆಗೂ ಇಡೀ ದೇಶದ ಜನರು ಈ ಹೋರಾಟ ಮುಂದುವರೆಸಬೇಕಿದೆ. ಈ ಬಾರಿ ರೈತರು, ಕಾರ್ಮಿಕರು, ಮಹಿಳೆಯರು ಈ ಹೋರಾಟದಲ್ಲಿ ಕೈಜೋಡಿಸಲಿದ್ದಾರೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ವಿಬಿ ಜಿ ರಾಮ್ ಜಿ ಕಾಯ್ದೆ-ಗ್ರಾಮೀಣ ಪ್ರದೇಶದ ಬಡ ಕಾರ್ಮಿಕರಿಗೆ ಮಾರಕ: ಸಿಎಂ
Next: ಸನ್‌ಡ್ಯಾನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಬೆಳಗಿದ ಬೆಂಗಳೂರು ಪ್ರತಿಭೆ: ನಿರ್ದೇಶಕಿ ಅನೂಯ ಸ್ವಾಮಿಗೆ ಜಾಗತಿಕ ಮನ್ನಣೆ!

Views:

41

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.