ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದ ಉತ್ಸವ “ಕನಕೋತ್ಸವಕ್ಕೆ” ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕನಕಪುರದಲ್ಲಿಇಂದು (ಬುಧವಾರ ಜ. 28) ಅಂಬಾರಿ ಭೂಷಿತ ಶ್ರೀ ಕೆಂಕೇರಮ್ಮ ಹಾಗೂ ಶ್ರೀ ಕಬ್ಬಾಳಮ್ಮ ದೇವಿಯ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ 250 ಕ್ಕೂ ಹೆಚ್ಚು ಗ್ರಾಮದೇವತೆಗಳನ್ನು ಹೊತ್ತ ರಥ, ಪಲ್ಲಕ್ಕಿ, ಪಟಗಳಿಗೂ ಪುಷ್ಪ ನಮನ ಸಲ್ಲಿಸಿದರು.
ನಕಪುರ ದೇಗುಲ ಮಠದ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ, ಮರಳೇಗವಿ ಮಠದ ಶ್ರೀ ಮುಮ್ಮಡಿ ಶಿವರುದ್ರ ಸ್ವಾಮೀಜಿ, ಶಿವಗಿರಿ ಕ್ಷೇತ್ರದ ಶ್ರೀ ಅನ್ನದಾನೇಶ್ವರ ಸ್ವಾಮೀಜಿ, ಹರಿಹರದ ಶ್ವಾಸಗುರು ಶ್ರೀ ವಚನಾನಂದ ಸ್ವಾಮೀಜಿ, ಬಮೂಲ್ ಅಧ್ಯಕ್ಷ, ನಿಕಟಪೂರ್ವ ಸಂಸದ ಡಿ ಕೆ ಸುರೇಶ್, ಶಾಸಕರಾದ ಆನೇಕಲ್ ಶಿವಣ್ಣ, ರೂಪಾ ಶಶಿಧರ್, ನೆಲಮಂಗಲ ಶ್ರೀನಿವಾಸ್, ಎಂಎಲ್ಸಿಗಳಾದ ಎಸ್ ರವಿ, ಬಲ್ಕಿಸ್ ಬಾನು, ದಿನೇಶ್ ಗೂಳಿಗೌಡ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕನಕಪುರ ರೂರಲ್ ಎಜುಕೇಷನ್ ಸೊಸೈಟಿಯ ಮುಖ್ಯಸ್ಥ ಶ್ರೀಕಂಠು ಮತ್ತಿತರರು ಜತೆಗಿದ್ದು, ಈ ಸತ್ಕಾರ್ಯದಲ್ಲಿ ಭಾಗಿಯಾದರು. ಇದನ್ನೂ ಓದಿ: ಜಿಟಿಸಿಸಿ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ ನೀಡಿದ ರ‍್ಯಾಂಗ್‌ಸನ್ಸ್ ಏರೋಸ್ಪೇಸ್, ಎಕ್ಸೈಡ್ ಎನರ್ಜಿ
