ಬೆಂಗಳೂರು: ಕರ್ನಾಟಕ ಸಾರಿಗೆ ನೌಕರರು ನಾಳೆ (ಗುರುವಾರ ಜನವರಿ 29) ರಂದು ಬೆಂಗಳೂರುನಲ್ಲಿರುವ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ವೇತನ ಹಿಂಬಾಕಿ, ಪರಿಷ್ಕರಣೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಎಲ್ಲ ರೀತಿ ತಯಾರಿ ಮಾಡಿಕೊಳ್ಳಲಾಗಿದ್ದು, ಸಂಜೆ 4 ಗಂಟೆ ಒಳಗಾಗಿ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದಿದ್ದರೆ ದೊಡ್ಡ ಹೋರಾಟಕ್ಕೆ ಸಾರಿಗೆ ನೌಕರರು ಸಜ್ಜಾಗಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿಮಾನ ಪತನದಲ್ಲಿ ಅಜಿತ್ ಪರಾವ್ ಅವರನ್ನ ಪತ್ತೆ ಹಚ್ಚಿದ್ದು ಹೇಗೆ ಗೊತ್ತಾ?
2020ರ ಜನವರಿ 1ರಿಂದ -2023ರ ಫೆಬ್ರವರಿ 28ರವರೆಗಿನ ವೇತನ ಪರಿಷ್ಕರಣೆ ಹಿಂಬಾಕಿ, 2024ರ ಜನವರಿ 1ರಿಂದ 4 ವರ್ಷಗಳ ವೇತನ ಒಪ್ಪಂದಕ್ಕೆ ಸಾರಿಗೆ ನೌಕರರು ಆಗ್ರಹಿಸಿದ್ದಾರೆ. ಆದರೆ, ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಮಾತ್ರ ಸಾರಿಗೆ ನೌಕರರು ಯಾವುದೇ ಮುಷ್ಕರ ಮಾಡುವಂತಿಲ್ಲ, ಮುಷ್ಕರಕ್ಕೆ ಬೆಂಬಲ ನೀಡುವಂತಿಲ್ಲ. ನಾಳೆ ಕೆಲಸಕ್ಕೆ ಬಾರದೇ ಇದ್ದಲ್ಲಿ ವೇತನ ನೀಡಲಾಗುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
