ಬೆಂಗಳೂರು: ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ನಿನ್ನೆ (ಬುಧವಾರ ಜ. 28) ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷರಾಗಿ ಅನಂತ್ ಸುಬ್ಬರಾವ್ ಕೆಲಸ ಮಾಡುತ್ತಿದ್ದರು. ಅನಂತ ಸುಬ್ಬರಾವ್ ನೇತೃತ್ವದಲ್ಲೇ ಇಂದು (ಜ. 29) ಮುಷ್ಕರ ಹಾಗೂ ಬೆಂಗಳೂರು ಚಲೋ ನಡೆಸಲು ಸಾರಿಗೆ ನೌಕರರು ನಿರ್ಧರಿಸಿದ್ದರು. ಆದರೇ, ಅನಂತ್ ಸುಬ್ಬರಾವ್ ಅವರೇ ವಿಧಿವಶರಾಗಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆನ್ನೆ ನಿಧನರಾದ ಕಾರ್ಮಿಕ ಮುಖಂಡರಾದ ಅನಂತ ಸುಬ್ಬರಾವ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಇದನ್ನೂ ಓದಿ: ಸಿಎಂ ಸಿದ್ದುಗೆ ಮೂಡ ಪ್ರಕರಣದಿಂದ ಮುಕ್ತಿ, ಅಭಿಮಾನಿಗಳಿಂದ ವಿಶೇಷ ಪೂಜೆ
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಶಾಸಕರಾದ ಪ್ರಿಯಕೃಷ್ಣ ಸೇರಿ ಹಲವರು ಪ್ರಮುಖರು ಮುಖ್ಯಮಂತ್ರಿಗಳ ಜೊತೆಗಿದ್ದರು.
