ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇತ್ತೀಚಿಗೆ ಡ್ರಗ್ಸ್ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ಬೆನ್ನೆಲೆ ಇತ್ತೀಚಿಗಷ್ಟೇ ಮೈಸೂರಿನಲ್ಲಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವು ಪತ್ತೆಯಾಗಿರುವ ಕುರಿತು ಇದೀಗ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ ಡ್ರಗ್ಸ್ ದಂಧೆಗಳಿಗೆ ಕಡಿವಾಣ ಹಾಕುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದನ್ನು ಹಾಕಿರುವ ಅವರು, ಗೃಹ ಸಚಿವರು ಮೈಸೂರಿನಲ್ಲಿ ಪತ್ತೆಯಾಗಿದ್ದ ಘಟಕವನ್ನು ಫಿನಾಯಿಲ್ ಫ್ಯಾಕ್ಟರಿ ಎಂದು ವ್ಯಾಖ್ಯಾನಿಸಿ, ಅಲ್ಲಿ ಡ್ರಗ್ಸ್ ತಯಾರಿಕೆ ಸಂಬಂಧಿ ಯಾವುದೇ ವಸ್ತುಗಳು ಸಿಕ್ಕಿಲ್ಲವೆಂದು ಸಮರ್ಥನೆ ಮಾಡಿದ್ದಾರೆ. ಇದನ್ನೂ ಓದಿ: ಕಾಂಪೌಂಡ್ ಕೆಡವಿದ್ದ ಮಾಲೀಕನ ಜೊತೆ ಯಶ್ ತಾಯಿ ರಂಪಾಟ!
ಕಾಂಗ್ರೆಸ್ ಸರ್ಕಾರ ಡ್ರಗ್ಸ್ ದಂಧೆ ನಿಗ್ರಹಣದಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆ ಯುವಕರ ಭವಿಷ್ಯದೊಂದಿಗೆ ಚೆಲ್ಲಾಟ ಮಾಡುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದಾಗ, ಗೃಹ ಸಚಿವ ಪರಮೇಶ್ವರ ‘ಡ್ರಗ್ಸ್ ದಂಧೆ ಎಲ್ಲ ರಾಜ್ಯಗಳಲ್ಲಿಯೂ ಇದೆ’ ಎಂದು ಉತ್ತರ ನೀಡಿದ್ದಾರೆ. ಈ ಉತ್ತರದಿಂದ ಈ ಗಂಭೀರ ವಿಚಾರದ ತೀವ್ರತೆಯನ್ನು ಅರಿಯದೇ ಮೆಚ್ಚಿನ ಪರಿಹಾರ ನೀಡಿದಂತೆ ಪ್ರತಿಪಕ್ಷ ನಾಯಕರಿಂದ ಟಿಪ್ಪಣಿ ಮಾಡಲಾಗಿದೆ ಎಂದು ಅಶೋಕ್ ತಿಳಿಸಿದ್ದಾರೆ.
