Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಒಬ್ಬ ಕಾಮನ್ ಮ್ಯಾನ್ ಹಣ ಸಂಪಾದನೆ ಮಾಡೋಕೆ ಬಿಜೆಪಿ ಬಿಡುತ್ತಿಲ್ಲ: ಪ್ರದೀಪ್ ಈಶ್ವರ್  
  • Bangalore
  • Crime
  • Politics
  • State
  • ರಾಮನಗರ

ಒಬ್ಬ ಕಾಮನ್ ಮ್ಯಾನ್ ಹಣ ಸಂಪಾದನೆ ಮಾಡೋಕೆ ಬಿಜೆಪಿ ಬಿಡುತ್ತಿಲ್ಲ: ಪ್ರದೀಪ್ ಈಶ್ವರ್  

Praja Vahini January 31, 2026
WhatsApp Image 2026-01-31 at 17.35.06
Spread the love

ರಾಮನಗರ: ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವು ಇದೀಗ ರಾಜ್ಯ ರಾಜಕೀಯದಲ್ಲಿ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ.

ಸಿಜೆ ರಾಯ್ ಅವರು ಸ್ವತಃ ತಮ್ಮ ಪಿಸ್ತೂಲಿನಿಂದ ತಾವೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ಇವರ ಆತ್ಮಹತ್ಯೆಯ ಸುತ್ತ ನೂರಾರು ಅನುಮಾನಗಳು ಬೆಳೆದು ನಿಲ್ಲುತಿವೆ.

ಹೌದು, ಕಾನ್ಫಿಡೆಂಟ್ ಗ್ರೂಪ್ ನ ಮುಖ್ಯಸ್ಥ ಸಿಜೆ ರಾಯ್ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಇನ್ನು ಇದೀಗ ಸಿಜೆ ರಾಯ್ ಅವರ ಆತ್ಮಹತ್ಯೆ ಕುರಿತಾಗಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಇಂದು (ಶನಿವಾರ ಜ. 31) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಜೆ ರಾಯ್ ಅವರೇ ಗುಂಡು ಹೊಡೆದುಕೊಂಡ್ರಾ ಅಥವಾ ಯಾರಾದ್ರು ಗುಂಡು ಹೊಡೆದ್ರಾ? ಎಂದು ರಾಯ್ ಆತ್ಮಹತ್ಯೆ ಬಗ್ಗೆ) ಅನುಮಾನ ವ್ಯಕ್ತಪಡಿಸಿದ್ದಾರೆ.

ಘಟನೆ ಆದ ಸ್ಥಳದಲ್ಲಿ ಸಿಸಿಟಿವಿ ಇಲ್ಲ, ಇದ್ದವರು ಐಟಿಯವರು ಮಾತ್ರ. ಒಳಗಡೆ ಏನಾಗಿದ್ಯೋ ಏನೋ ಗೊತ್ತಿಲ್ಲ. ನನಗಿರುವ ಪ್ರಾಥಮಿಕ ಮಾಹಿತಿ ಪ್ರಕಾರ ಬಿಜೆಪಿಯವರು ಚುನಾವಣೆಗೆ ನೂರಾರು ಕೋಟಿ ದುಡ್ಡು ಕೇಳಿದ್ದಾರೆ. ಅವರು ಹಣ ಕೊಡದಿದ್ದಕ್ಕೆ ಅವರನ್ನ ಟಾರ್ಗೆಟ್ ಮಾಡಿದ್ದಾರೆ. ಇಂತಹ ಭ್ರಷ್ಟ ಬಿಜೆಪಿಯಿಂದ ನಮ್ಮ ದೇಶ ಅಭಿವೃದ್ಧಿ ಆಗಲ್ಲ. ಅಶೋಕಣ್ಣ, ಸುನೀಲಣ್ಣ, ಯತ್ನಾಳ್ ಅವ್ರು ಮೈಸೂರಿನ ಒಂದು ಕೋತಿ ಎಲ್ಲದಕ್ಕೂ ಬಾಯಿ ಬಡಿದುಕೊಳ್ತಾರೆ. ಇದರ ಬಗ್ಗೆ ಯಾಕೆ ಯಾರೂ ಬಾಯಿ ಬಿಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿಜೆ ರಾಯ್ ಆತ್ಮಹತ್ಯೆಗೆ ಕೇರಳ ಎಲೆಕ್ಷನ್ ಕಂಟಕ!?

ಒಬ್ಬ ಕಾಮನ್ ಮ್ಯಾನ್ ಹಣ ಸಂಪಾದನೆ ಮಾಡೋಕೆ ಬಿಜೆಪಿ ಬಿಡುತ್ತಿಲ್ಲ. ಅವರಿಗೆ ಸಾಲ ಇಲ್ಲ, ಯಾವುದೇ ಸಮಸ್ಯೆ ಇಲ್ಲ ಕಳೆದ ಒಂದು ತಿಂಗಳಿನಿಂದ ಐಟಿ ಅವರಿಗೆ ಕಿರುಕುಳ ನೀಡಿದೆ. ಕೇಂದ್ರದಲ್ಲಿ ಬಿಜೆಪಿ ಇದ್ರೆ ಇದೇ ಕಿರುಕುಳ ಮುಂದುವರಿಯುತ್ತದೆ. ಈ ಬಗ್ಗೆ ಎಸ್‌ಐಟಿ ತನಿಖೆ ಆಗಲಿ. ಎಂದು ಒತ್ತಾಯಿಸಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಸಮಯ ಹಾಗೂ ಸಮುದ್ರದ ಅಲೆಗಳು ಯಾರಿಗೂ ಕಾಯುವುದಿಲ್ಲ‌: ನಿಖಿಲ್
Next: ಅರವಿಂದ ಲಿಂಬಾವಳಿ ಹುಟ್ಟುಹಬ್ಬದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.