ಮಹದೇವಪುರ: ಮಾಜಿ ಸಚಿವರು, ಮಹದೇವಪುರ ವಿಧಾನಸಭಾ ಕ್ಷೇತ್ರದ ಹಿಂದಿನ ಶಾಸಕರು ಮತ್ತು ನನ್ನ ಪತಿ ಶ್ರೀ ಅರವಿಂದ ಲಿಂಬಾವಳಿ ಅವರ ಜನ್ಮದಿನದ ಅಂಗವಾಗಿ, ಅವರೊಂದಿಗೆ ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಜ್ಯೋತಿಪುರ ಗ್ರಾಮದ ಜ್ಯೋತಿರ್ಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಈ ವೇಳೆ ನೆರೆದಿದ್ದ ಮುಖಂಡರು ಹಾಗೂ ಕಾರ್ಯಕರ್ತರು ಶ್ರೀ ಅರವಿಂದ ಲಿಂಬಾವಳಿ ಅವರಿಗೆ ಹುಟ್ಟುಹಬ್ಬದ ಶುಭ ಕೋರಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
